ಬಳ್ಳಾರಿ / ಕಂಪ್ಲಿ : ಜಿಲ್ಲೆ ಹಾಗೂ ವಿವಿಧ ತಾಲೂಕು ಕೇಂದ್ರಗಳಲ್ಲಿ 5 ಪರೀಕ್ಷೆ ಕೇಂದ್ರಗಳಲ್ಲಿ ಅಲ್ಪಸಂಖ್ಯಾತರ ಮುರಾರ್ಜಿ ವಸತಿ ಶಾಲೆಗೆ 6ನೇ ತರಗತಿಯ ಪ್ರವೇಶ ಪರೀಕ್ಷೆಗೆ ಒಟ್ಟು 1571 ಅರ್ಜಿಗಳು ಸಲ್ಲಿಕೆಯಾಗಿದ್ದು, ಸದರಿ ಪರೀಕ್ಷೆಗೆ ಗಂಡು 595 ಹೆಣ್ಣು 473 ಒಟ್ಟು 1068
ವಿದ್ಯಾರ್ಥಿಗಳು ಹಾಜರಾಗಿ ಪರೀಕ್ಷೆಯನ್ನು ಬರೆದಿರುತ್ತಾರೆ ಮತ್ತು 503 ವಿದ್ಯಾರ್ಥಿಗಳು ಗೈರುಹಾಜರಾಗಿದ್ದಾರೆ.
ಆಯಾ ಪರೀಕ್ಷೆ ಕೇಂದ್ರಗಳಲ್ಲಿ 6ನೇ ತರಗತಿಗೆ ಪ್ರವೇಶ ಪರೀಕ್ಷೆ ಬರೆಯಲು ಬಂದಿರುವ ವಿದ್ಯಾರ್ಥಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕೊಠಡಿ ವ್ಯವಸ್ಥೆ ಪರೀಕ್ಷೆ ಕೇಂದ್ರ ಸುತ್ತಲೂ ಸಿಸಿ ಕ್ಯಾಮೆರಾ ಇರುತ್ತೆ ಪರೀಕ್ಷೆ ಕೇಂದ್ರ ಸುತ್ತಲೂ ಪೊಲೀಸ್ ಬಿಗಿ ಭದ್ರತೆ ಮಾಡಲಾಗಿದೆ ಎಂದು ಶ್ರೀ ವಿಠೋಬಾ ಹೊನಕಾಂಡೆ, ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಬಳ್ಳಾರಿ ರವರು ಹಾಗೂ ಇತರೆ ಅಧಿಕಾರಿಗಳು ಈ ಮೇಲಿನ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿ ನಡೆಸಿದರು.
ವರದಿ : ಜಿಲಾನಸಾಬ್ ಬಡಿಗೇರ್.
