ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕಂಪ್ಲಿ ವಿಧಾನಸಭಾ ಕ್ಷೇತ್ರದ ದ್ವಿತೀಯ ಪಿಯುಸಿ ಹೆಚ್ಚಿನ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮ

ಬಳ್ಳಾರಿ / ಕಂಪ್ಲಿ : ಪಟ್ಟಣದ ಸಂಗಾತ್ರಯ ಸಂಸ್ಕೃತ ಪಾಠಶಾಲೆಯಲ್ಲಿ ಪುರಸಭಾ ಸದಸ್ಯ ಸಿ.ಆರ್. ಹನುಮಂತ ನೇತೃತ್ವದಲ್ಲಿ, ಶಾಸಕ ಜೆ.ಎನ್. ಗಣೇಶ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಸೇರ್ಪಡೆ ಹಾಗೂ ಕಂಪ್ಲಿ ವಿಧಾನಸಭಾ ಕ್ಷೇತ್ರ ದ್ವಿತೀಯ ಪಿಯುಸಿ ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜರುಗಿತು.

ಎಪಿಎಂಸಿ ಅಧ್ಯಕ್ಷ ಹಬೀಬ್ ರೆಹಮಾನ್ ಪ್ರಾಸ್ತಾವಿಕವಾಗಿ ಮಾತನಾಡಿ ಸಾಮಾನ್ಯ ಕಾರ್ಯಕರ್ತರಿಗೂ ಕಂಪ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಉನ್ನತ ಮಟ್ಟದ ಸ್ಥಾನ ದೊರಕಿದೆ. ಕಾಂಗ್ರೆಸ್ ಪಕ್ಷವು ಬಡವರ ದೀನ ದಲಿತರ ಪರವಾಗಿದೆ ಹಾಗೂ ವಿದ್ಯಾರ್ಥಿಗಳಿಗೆ ಶಾಸಕರು ಹೆಚ್ಚಿನ ಅನುದಾನವನ್ನು ತಂದಿದ್ದು ಕಂಪ್ಲಿ ವಿಧಾನಸಭಾ ಕ್ಷೇತ್ರವನ್ನು ಮಾದರಿ ಶೈಕ್ಷಣಿಕ ಕ್ಷೇತ್ರವನ್ನಾಗಿ ಮಾಡಲಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಕಂಪ್ಲಿ ವಿಧಾನಸಭಾ ಕ್ಷೇತ್ರದ ಶಾಸಕ ಜೆ. ಎನ್. ಗಣೇಶ ಮಾತನಾಡಿ ಕಂಪ್ಲಿ ಮತ್ತು ಕುರುಗೋಡಿನಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆಯನ್ನು ನೀಡಿದ್ದು, ಶಿಕ್ಷಣ ಕ್ಷೇತ್ರಕ್ಕೆ 400 ಕೋಟಿ ರೂಪಾಯಿಯಷ್ಟು ಅನುದಾನ ತಂದಿದ್ದೇನೆ, ಹಂಪಾದೇವನಹಳ್ಳಿ ಹತ್ತಿರ ಎಸ್ ಸಿ, ಎಸ್ ಟಿ, ಹಾಸ್ಟೆಲ್ ಮಂಜೂರಾಗಿದೆ, ಉಪ್ಪಾರಹಳ್ಳಿ ಗ್ರಾಮದ ಹತ್ತಿರ ಕೌಶಲ್ಯಾಭಿವೃದ್ಧಿ ಕಾಲೇಜ್ ಮಂಜೂರಾಗಿದ್ದು, ಅಲ್ಪಸಂಖ್ಯಾತರ ಮೊರಾರ್ಜಿ ಹಾಸ್ಟೆಲ್ ನೂತನ ಕಟ್ಟಡ, ಪ್ರಥಮ ದರ್ಜೆ ಕಾಲೇಜಿಗೆ ನವೀಕರಣಗೊಂಡ ಉನ್ನತ ಮಟ್ಟದ ಗ್ರಂಥಾಲಯವನ್ನು ಸ್ಥಾಪಿಸಲಾಗಿದೆ. ಇದೇ ವರ್ಷ ಇದೇ ಶೈಕ್ಷಣಿಕ ವರ್ಷದಿಂದ ಬಿಎ. ಬಿಕಾಂ. ಬಿಎಸ್ ಸಿ ಯ ವಿವಿಧ ವಿಷಯಗಳ ಕೋರ್ಸ್ ಗಳನ್ನು ಪ್ರಾರಂಭಿಸಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಮಟ್ಟದಲ್ಲಿ ಶಿಕ್ಷಣಕ್ಕೆ ಒತ್ತು ನೀಡಲಾಗುವುದು ಎಂದರು.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಚುನಾವಣೆಯಲ್ಲಿ ಭರವಸೆ ನೀಡಿದಂತೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವ ಮೂಲಕ ಜನರ ಸಂಕಷ್ಟಕ್ಕೆ ನೆರವಾಗಿದ್ದೇವೆ. ಕಂಪ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿಯ ಪರ್ವ ಶುರುವಾಗಿದೆ ಎಂದು ತಿಳಿಸಿದರು.

ಕುಮಾರಿ ಸಾಯಿ ನಿಧಿಯ ಭರತನಾಟ್ಯ ಕಾರ್ಯಕ್ರಮ ಎಲ್ಲರ ಮನಸೂರೆಗೊಂಡಿತು.

ನಂತರ ಮಾತನಾಡಿ ಈ ಕಾರ್ಯಕ್ರಮದ ರೂವಾರಿ ಪುರಸಭಾ ಸದಸ್ಯ ಸಿಆರ್ ಹನುಮಂತ ಮಾತನಾಡಿ ಮುಂಬರುವ ದಿನಗಳಲ್ಲಿ ಕಂಪ್ಲಿ ವಿಧಾನಸಭಾ ಕ್ಷೇತ್ರವನ್ನು ರಾಜ್ಯದಲ್ಲಿಯೇ ನಂಬರ್ ಒನ್ ಕ್ಷೇತ್ರವನ್ನಾಗಿ ಮಾಡಲಾಗುವುದು ಹಾಗೂ ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಶಾಸಕರ ನಾಯಕತ್ವದಲ್ಲಿ ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡೋಣ ಹಾಗೂ ಕ್ಷೇತ್ರದ ವಿದ್ಯಾರ್ಥಿಗಳಿಗೆ ಶಾಸಕರು ಹೆಚ್ಚಿನ ಅನುದಾನವನ್ನ ನೀಡುತ್ತಿದ್ದಾರೆ ಮುಂಬರು ದಿನಗಳಲ್ಲಿ ಇನ್ನು ಹೆಚ್ಚಿನ ಅನುದಾನವನ್ನ ತರಲಾಗುತ್ತದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕಂಪ್ಲಿ ವಿಧಾನಸಭಾ ಕ್ಷೇತ್ರದ ದ್ವಿತೀಯ ಪಿಯುಸಿಯಲ್ಲಿ ಹೆಚ್ಚಿನ ಅಂಕ ಗಳಿಸಿದ ನಾನಾ ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನಿಸಿ ಗೌರವಿಸಲಾಯಿತು.

ನಂತರ ಜರುಗಿದ ಕಾಂಗ್ರೆಸ್ ಪಕ್ಷದ ಸೇರ್ಪಡೆಯಲ್ಲಿ ವಿವಿಧ ಪಕ್ಷಗಳನ್ನು ತೊರೆದು ನೂರಾರು ಮುಖಂಡರು ಹಾಗೂ ಕಾರ್ಯಕರ್ತರು ಶಾಸಕರ ಅಧ್ಯಕ್ಷತೆಯಲ್ಲಿ, ಪುರಸಭಾ ಸದಸ್ಯ ಸಿ.ಆರ್. ಹನುಮಂತ ನೇತೃತ್ವದಲ್ಲಿ ಸೇರ್ಪಡೆಗೊಂಡರು.

ಈ ಸಂದರ್ಭದಲ್ಲಿ ಕಂಪ್ಲಿ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಕೆ. ಶ್ರೀನಿವಾಸ ( ವಾಸಪ್ಪ) , ಕುರುಗೋಡು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚನ್ನಬಸವರಾಜ, ಪುರಸಭೆ ಅಧ್ಯಕ್ಷ ಬಿ. ಪ್ರಸಾದ, ಸ್ಥಾಯಿ ಸಮಿತಿ ಅಧ್ಯಕ್ಷ ಬಿ. ಉಸ್ಮಾನ, ಕುರುಗೋಡ ಪುರಸಭಾ ಉಪಾಧ್ಯಕ್ಷ ಚೆನ್ನಪಟ್ಟಣ ಮಲ್ಲಿಕಾರ್ಜುನ, ಕಂಪ್ಲಿ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಕೆ. ರಿಯಾಜ್ ಅಹಮ್ಮದ, ಮುಖಂಡರಾದ ಓಂಕಾರಪ್ಪ, ಬಿ. ಸಿದ್ದಪ್ಪ, ಎಂ ಗೋಪಾಲ, ಎಂ ಸಿ ಮಾಯಪ್ಪ, ಷಣ್ಮುಖಪ್ಪ, ರಾಮಸಾಗರ ನಾರಾಯಣಪ್ಪ, ಅಬ್ದುಲ್ ಮುನಾಫ್, ಕೆ. ಮೈಮೂದ, ಬಿ. ಜಾಫರ ಕೆ. ವಾಹೀದ, ವಿ. ರಘುನಾಯಕ್, ಸೇರಿದಂತೆ ಯುವ ಕಾಂಗ್ರೆಸ್ ಪದಾಧಿಕಾರಿಗಳು ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಒಳಗೊಂಡಂತೆ ವಿವಿಧ ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ಪಾಲಕರು ಹಾಜರಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ