ಬಾಗಲಕೋಟೆ :ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ನೀಡುವ ರಾಜ್ಯ ಮಟ್ಟದ ಕಾಯಕ ಯೋಗಿ ಪ್ರಶಸ್ತಿಗೆ ಲಿಂಗಸಗೂರು ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಪತ್ತಿನ ಸಹಕಾರಿ ಸಂಘದ ಕಾರ್ಯ ನಿರ್ವಾಹಕರಾದ ಶ್ರೀ ಶರಣಬಸವ ಅತ್ತನೂರು ಅವರು ಭಾಜರಾಗಿದ್ದಾರೆ ಎಂದು ಪರಿಷತ್ತಿನ ಜಿಲ್ಲಾಧ್ಯಕ್ಷ ನಬೀಸಾಬ್ ಆನಾಹೊಸೂರ ಪತ್ರಿಕೆಗೆ ತಿಳಿಸಿದ್ದಾರೆ. ಅವರ ಪ್ರಾಮಾಣಿಕತೆ, ದಕ್ಷತೆ, ಕರ್ತವ್ಯ ಪ್ರಜ್ಞೆ ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆಯಾದ ಮಾಡಲಾಗಿದೆ, ಮೇ 01 ರ ಗುರುವಾರರಂದು ಬಾಗಲಕೋಟ ಜಿಲ್ಲೆಯ ರಬಕವಿ ನಗರದ ಶ್ರೀ ಶಿವದಾಸಿಮಯ್ಯ ಸಮುದಾಯ ಭವನದಲ್ಲಿ ನಡೆಯುವ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಗೌರವಿಸಿ, ಸನ್ಮಾನಿಸಲಾಗುವುದು ಎಂದು ತಿಳಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು, ಚಿಂತಕರು, ಸಾಹಿತಿಗಳು ಭಾಗವಹಿಸುವವರಿದ್ದಾರೆ.
- ಕರುನಾಡ ಕಂದ
