ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣದಲ್ಲಿ ಕೆಲವು ಖಾಸಗಿ ಶಾಲೆಗಳಲ್ಲಿ ಸರ್ಕಾರದ ಅನುಮತಿ ಇಲ್ಲದೆ ಬೇಸಿಗೆ ಶಿಬಿರಗಳನ್ನು ನಡೆಸುತ್ತಿರುವುದು ಕಂಡುಬಂದಿದೆ.
ಬೇಸಿಗೆ ಬಿರು ಬಿಸಿಲಿನಲ್ಲಿ ಶಿಬಿರಗಳನ್ನು ನಡೆಸುತ್ತಿರುವುದರಿಂದ ವಿದ್ಯಾರ್ಥಿಗಳ ಆರೋಗ್ಯದ ಮೇಲೆ ತೀವ್ರ ವ್ಯತಿರಿಕ್ತ ಪರಿಣಾಮ ಉಂಟಾಗುತ್ತದೆ,
ವಿದ್ಯಾರ್ಥಿಗಳ ಮಾನಸಿಕ ಹಾಗೂ ದೈಹಿಕ ಸ್ವಾಸ್ಥ್ಯ ಹಾಳಾಗುತ್ತದೆ ಸರ್ಕಾರದ ಆದೇಶ ಮತ್ತು ತಮ್ಮ ನಿರ್ದೇಶನ ಕುರಿತು ಕ್ಷೇತ್ರದ ಇ,ಸಿ,ಒ, ಸಿ, ಅರ್, ಪಿ, ಗಳಿಗೆ ಹಾಗೂ ಕ್ಷೇತ್ರದ ಶಿಕ್ಷಣಾಧಿಕಾರಿಗಳಿಗೆ ಹಲವು ಬಾರಿ ಕೊಟ್ಟೂರು ತಾಲೂಕು ಎಸ್ ಡಿ ಎಂ ಸಿ ಅಧ್ಯಕ್ಷರಾದ ಕೆ. ಎಸ್. ಹರೀಶ್ ರವರು ಮೌಖ್ಯವಾಗಿ ಅಧಿಕಾರಿಗಳಿಗೆ ಗಮನಕ್ಕೆ ತಂದರೂ ಸಂಬಂಧಪಟ್ಟ ಅದಿಕಾರಿಗಳು ಸರ್ಕಾರದ ಹಾಗೂ ವಿಜಯನಗರ ಜಿಲ್ಲೆ ಉಪ ನಿರ್ದೇಶಕರ ಆದೇಶಗಳನ್ನು ಗಾಳಿಗೆ ತೂರಿ ಖಾಸಗಿ ಶಾಲೆಗಳು ಬೇಸಿಗೆ ಶಿಬಿರ ನೆಡೆಸುತ್ತಿರುವ ಶಾಲೆಗಳ ಮೇಲೆ ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ಕ್ರಮ ವಹಿಸದೆ ಇರುವುದು ಅವರ ದಿವ್ಯ ನಿರ್ಲಕ್ಷ ಎದ್ದು ಕಾಣುತ್ತದೆ ,ಖಾಸಗಿ ಶಾಲೆಗಳಲ್ಲಿ ಬೇಸಿಗೆ ಶಿಬಿರಗಳನ್ನು ನಡೆಸುತ್ತಿರುವ ಶಾಲೆಗಳ ಮೇಲೆ ಹಾಗೂ ಈ ಕುರಿತು ನಿರ್ಲಕ್ಷ್ಯ ವಹಿಸುತ್ತಿರುವ ಅದಿಕಾರಿಗಳ ಮೇಲೆ ವಿಜಯನಗರ ಜಿಲ್ಲೆ ಉಪ ನಿರ್ದೇಶಕರು ಕೂಡಲೇ ಕಾನೂನು ಕ್ರಮ ಜರುಗಿಸಬೇಕೆಂದು ಕೊಟ್ಟೂರು ತಾಲೂಕಿನ ಎಸ್ ಡಿ ಎಂ ಸಿ ಅಧ್ಯಕ್ಷರಾದ ಕೆ ಎಸ್ ಹರೀಶ್ ರವರು ಮಾಧ್ಯಮ ಜೊತೆ ಮಾತನಾಡಿ ಆಗ್ರಹಿಸಿದರು.
- ಕರುನಾಡ ಕಂದ
