ಬೆಂಗಳೂರು : ಮಾರ್ಚ್-ಏಪ್ರಿಲ್ ತಿಂಗಳಲ್ಲಿ ರಾಜ್ಯಾದ್ಯಂತ SSLC ಪರೀಕ್ಷೆ ನಡೆದಿತ್ತು
ನಾಳೆ 2025ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಫಲಿತಾಂಶ.
SSLC ಪರೀಕ್ಷೆ ಅನ್ನೋದು ವಿದ್ಯಾರ್ಥಿಗಳ ಭವಿಷ್ಯದ ಬಹಳ ದೊಡ್ಡ ತಿರುವು. ರಾಜ್ಯದ 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು, ಪೋಷಕರು ಕಾಯುತ್ತಿದ್ದ ಸಮಯ ಬಂದೇ ಬಿಟ್ಟಿದೆ. ನಾಳೆ ಕರ್ನಾಟಕ ಪರೀಕ್ಷಾ ಮಂಡಳಿ SSLC ಫಲಿತಾಂಶ ಪ್ರಕಟ ಮಾಡುವುದಾಗಿ ಅಧಿಕೃತ ಮಾಹಿತಿ ನೀಡಿದೆ.
ಕಳೆದ ಮಾರ್ಚ್-ಏಪ್ರಿಲ್ ತಿಂಗಳಲ್ಲಿ ರಾಜ್ಯಾದ್ಯಂತ SSLC ಪರೀಕ್ಷೆ ನಡೆದಿತ್ತು. ರಾಜ್ಯದ ಎಲ್ಲೆಡೆ 8 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ಬರೆದಿದ್ದಾರೆ. ಈಗಾಗಲೇ ಮೌಲ್ಯಮಾಪನ ಕಾರ್ಯ ಮುಗಿಸಿರುವ ಕರ್ನಾಟಕ ಪರೀಕ್ಷಾ ಮಂಡಳಿ, ನಾಳೆ SSLC ಫಲಿತಾಂಶ ಪ್ರಕಟಿಸುವುದಾಗಿ ತಿಳಿಸಿದೆ.
ಶಿಕ್ಷಣ ಇಲಾಖೆಯಿದ ಮಾಧ್ಯಮ ಪ್ರಕಟಣೆ
2025ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಪರೀಕ್ಷೆಗಳು ದಿನಾಂಕ: 21-03-2025 ರಿಂದ 04-04-2025 ರವರೆಗೆ ನಡೆಸಲಾಯಿತು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿರುತ್ತದೆ. ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಿಸುವ ಸಂಬಂಧ ದಿನಾಂಕ 02-05-2025 ರಂದು ಬೆಳಗ್ಗೆ 11-30 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರ ಅಧ್ಯಕ್ಷತೆಯಲ್ಲಿ ಸುದ್ದಿಗೋಷ್ಠಿಯನ್ನು ಕರೆಯಲಾಗಿದೆ.
ನಾಳೆ ಬೆಳಗ್ಗೆ 11-30 ಗಂಟೆಗೆ ಶಿಕ್ಷಣ ಸಚಿವರು SSLC ಫಲಿತಾಂಶವನ್ನು ಪ್ರಕಟ ಮಾಡಲಿದ್ದಾರೆ. ನಂತರ ಮಧ್ಯಾಹ್ನ 12-30 ಗಂಟೆಯ ನಂತರ SSLC ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ವೀಕ್ಷಿಸಬಹುದಾಗಿದೆ.
ವರದಿ : ಜಿಲಾನಸಾಬ್ ಬಡಿಗೇರ್
