ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಎಸ್‌ಎಸ್‌ಎಲ್‌ಸಿ ಪರೀಕ್ಷೆ 62.14% ಫಲಿತಾಂಶ; ಸುದ್ದಿಗೋಷ್ಠಿಯಲ್ಲಿ ಸಚಿವ ಮಧು ಬಂಗಾರಪ್ಪ ಘೋಷಣೆ

ಬೆಂಗಳೂರು : 2024-25ನೇ ಸಾಲಿನ ಎಸ್​​ಎಸ್​ಎಲ್​​ಸಿ ಫಲಿತಾಂಶ ಪ್ರಕಟವಾಗುತ್ತಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಫಲಿತಾಂಶ ಪ್ರಕಟಿಸುತ್ತಿದ್ದಾರೆ. ಮಾರ್ಚ್, ಏಪ್ರಿಲ್ ತಿಂಗಳಲ್ಲಿ ನಡೆದಿದ್ದ ಪರೀಕ್ಷೆಗೆ 8,96,447 ವಿದ್ಯಾರ್ಥಿಗಳು ಹಾಜರಾಗಿದ್ದರು. 15,881 ಶಾಲೆಗಳ ವಿದ್ಯಾರ್ಥಿಗಳು 2,818 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆದಿದ್ದರು.

2024-25ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಶೇ. 62.34 ರಿಸಲ್ಟ್ ಬಂದಿದೆ. ಎಂದಿನಂತೆ ಬಾಲಕರಿಗಿಂತ ಬಾಲಕಿಯರು ಹೆಚ್ಚು ಪ್ರತಿಶತದಷ್ಟು ಫಲಿತಾಂಶ ಪಡೆದಿದ್ದಾರೆ. 22 ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಪಡೆದಿದ್ದಾರೆ.

2024-25ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ದಕ್ಷಿಣ ಕನ್ನಡ ಜಿಲ್ಲೆ (ಶೇ.91.12), ಉಡುಪಿ ಜಿಲ್ಲೆ (ಶೇ.89.96), ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆ ಮೊದಲ ನಾಲ್ಕು ಸ್ಥಾನ ಪಡೆದಿವೆ.

ಈ ಬಾರಿ ಶೇ. 62.14 ಫಲಿತಾಂಶ ಬಂದಿದೆ. ಎಂದಿನಂತೆ ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ. ಮಧ್ಯಾಹ್ನ 12.30ರ ನಂತರ ಇಲಾಖೆಯ ಅಧಿಕೃತ ವೆಬ್​ಸೈಟ್​​ನಲ್ಲಿ ವಿದ್ಯಾರ್ಥಿಗಳು ಫಲಿತಾಂಶ ವೀಕ್ಷಿಸಬಹುದಾಗಿದೆ. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮಾಡಿದಂತೆಯೇ ಎಸ್​ಎಸ್​​ಎಲ್​ಸಿ ವಿದ್ಯಾರ್ಥಿಗಳಿಗೂ ಈ ವರ್ಷ ಇನ್ನೆರಡು ಪರೀಕ್ಷೆಯ ಅವಕಾಶ ನೀಡಲಾಗುತ್ತಿದೆ. ಉತ್ತೀರ್ಣರಾಗದಿದ್ದರೆ ಅಥವಾ ಉತ್ತಮ ಅಂಕ ಲಭಿಸದಿದ್ದರೆ ವಿದ್ಯಾರ್ಥಿಗಳು ಇನ್ನು ಎರಡು ಬಾರಿ ಪರೀಕ್ಷೆ ಬರೆಯಬಹುದಾಗಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಸಂಬಂಧಿತ ಅಪ್​​ಡೇಟ್​​ಗಳು ಇಲ್ಲಿ ದೊರೆಯಲಿವೆ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ