ಬಳ್ಳಾರಿ / ಕಂಪ್ಲಿ : 2024-25 ರ ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಕಂಪ್ಲಿಯ ವಿದ್ಯಾಸಾಗರ ಆಂಗ್ಲ ಮಾಧ್ಯಮ ವಸತಿ ಪ್ರೌಢಶಾಲೆಯು ಶೇ.98 ರಷ್ಟು ಸಾಧನೆ ಮಾಡಿದೆ.
ಕಳೆದ ಹಲವು ವರ್ಷಗಳಿಂದ ವಿದ್ಯಾಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸುತ್ತಾ ಬಂದಿದ್ದು, ಈ ವರ್ಷದಲ್ಲಿಯೂ ವಿದ್ಯಾಸಾಗರ ಆಂಗ್ಲ ಮಾಧ್ಯಮ ವಸತಿ ಪ್ರೌಢ ಶಾಲೆಯು ಈ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇ.98 ರಷ್ಟು ಉತ್ತಮ ಫಲಿತಾಂಶ ಪಡೆದಿದೆ.
ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶಾಲೆಯ ಹಿರಿಮೆ ಹೆಚ್ಚಿಸಿದ್ದಾರೆ.
ವಿದ್ಯಾರ್ಥಿಗಳು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿರುವುದು ಹರ್ಷದಾಯಕವಾಗಿದೆ ಎಂದು ವಿದ್ಯಾಸಾಗರ ಆಂಗ್ಲ ಮಾಧ್ಯಮ ವಸತಿ ಪ್ರೌಢಶಾಲೆ ಪ್ರಾಚಾರ್ಯ ಪಿ.ನಾಗೇಶ್ವರರಾವ್, ಉಪ ಪ್ರಾಚಾರ್ಯ ಸಾಯಿ ಕಿಶೋರ್ ತಿಳಿಸಿದ್ದಾರೆ.
ಈ ಶಾಲೆಯ ವಿದ್ಯಾರ್ಥಿಗಳ ಸಾಧನೆಗೆ ವಿದ್ಯಾಸಾಗರ ಆಂಗ್ಲ ಮಾಧ್ಯಮ ವಸತಿ ಪ್ರೌಢ ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಕ ವೃಂದದವರು ಹಾಗೂ ಶಿಕ್ಷಣ ಪ್ರೇಮಿಗಳು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ವರದಿ : ಜಿಲಾನಸಾಬ್ ಬಡಿಗೇರ್
