
ವಿಜಯನಗರ / ಹೊಸಪೇಟೆ : ನಗರದ ಕೊಂಡನಾಯಕನಹಳ್ಳಿಯ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ವಸತಿ, ಅಲ್ಪಸಂಖ್ಯಾತರ ವಕ್ಫ್ ಇಲಾಖೆ ಸಚಿವರು ಹಾಗೂ ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆಗಳ ಉಸ್ತುವಾರಿ ಸಚಿವರಾದ ಶ್ರೀ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಮಾತನಾಡಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸರ್ಕಾರ ಎರಡು ವರ್ಷ ಯಶಸ್ವಿಯಾಗಿ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಮೇ 20 ರಂದು ಹೊಸಪೇಟೆಯಲ್ಲಿ ಸರ್ಕಾರದ ಎರಡು ವರ್ಷದ ಸಾಧನಾ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ನಗರದಲ್ಲಿರುವ ಜಿಲ್ಲಾ ಕ್ರೀಡಾಂಗಣದಲ್ಲಿ ಮೇ 20 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಬೃಹತ್ ವೇದಿಕೆ ಕಾರ್ಯಕ್ರಮ ಜರುಗಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ರಾಜ್ಯಸಭಾ ವಿರೋಧಪಕ್ಷದ ನಾಯಕರು ಹಾಗೂ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಅನೇಕ ಸಚಿವರು, ಶಾಸಕರು ಭಾಗವಹಿಸಲಿದ್ದಾರೆ.
ಸರ್ಕಾರದ ಎರಡನೇ ವರ್ಷದ ಸಾಧನೆ ಪೂರ್ವಭಾವಿ ಸಭೆಯಲ್ಲಿ ತಿಳಿಸಿದರು.
ವಿಜಯನಗರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಜಿಲ್ಲಾಧ್ಯಕ್ಷರು ಮಾಜಿ ಶಾಸಕರಾದ ಶ್ರೀ ಸಿರಾಜ್ ಶೇಖ್ ಮಾತನಾಡಿ ಸಮಾವೇಶದಲ್ಲಿ ಸುಮಾರು 2 ಲಕ್ಷ ಜನರು ಸೇರುವ ನಿರೀಕ್ಷೆ ಇದೆ. ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಲಿದ್ದಾರೆ. ಇದಕ್ಕೆ ಬೇಕಾದ ಎಲ್ಲಾ ಸಿದ್ಧತೆಗೆ ಜಿಲ್ಲಾಡಳಿತ ಸೂಕ್ತ ಕ್ರಮ ವಹಿಸಬೇಕು. ಎರಡು ಜಿಲ್ಲೆಯ ಜನರು ಆಗಮಿಸಲು ಅಂದಾಜು 2000 ಬಸ್‌ಗಳ ವ್ಯವಸ್ಥೆ ಕಲ್ಪಿಸಬೇಕು. ಬಿಸಿಲಿನ ತಾಪವನ್ನು ನೀಗಿಸಲು ಜನರಿಗೆ ನೆರಳಿನ ವ್ಯವಸ್ಥೆ, ಶೌಚಾಲಯ, ಶುದ್ಧ ಕುಡಿಯುವ ನೀರು, ನಂದಿನಿ ಮಜ್ಜಿಗೆ ವ್ಯವಸ್ಥೆ ಸೇರಿ ಊಟದ ವ್ಯವಸ್ಥೆ ಕಲ್ಪಿಸಬೇಕು. ನಮ್ಮ ಪಕ್ಷದ ಕಾರ್ಯಕರ್ತರು ನಮ್ಮ ಸರಕಾರದ ಎರಡು ವರ್ಷದ ಸಾಧನೆಯನ್ನು ಮನೆ ಮನೆಗೆ ತಲುಪಿಸಿ ಹೆಚ್ಚಿನ ಸಂಖ್ಯೆಯಲ್ಲಿ ಫಲಾನುಭವಿಗಳು ಹಾಗೂ ಸಾರ್ವಜನಿಕರನ್ನು ಭಾಗವಹಿಸುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದ್ದರು.
ಈ ಸಂದರ್ಭದಲ್ಲಿ ಬಳ್ಳಾರಿ ಹಾಗೂ ವಿಜಯನಗರ ಲೋಕಸಭಾ ಸದಸ್ಯರಾದ ಶ್ರೀ ಇ. ತುಕಾರಾಮ್ , ಮಾಜಿ ಕರ್ನಾಟಕ ವಕ್ಫ್ ಮಂಡಳಿ ಅಧ್ಯಕ್ಷರಾದ ಅನ್ವರ್ ಭಾಷಾ ಹೊಸಪೇಟೆಯ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ಎನ್.ಮೊಹಮ್ಮದ್ ಇಮಾಮ್ ನಿಯಾಜಿ, ಕೊಪ್ಪಳ ನಗರಸಭೆ ಅಧ್ಯಕ್ಷರಾದ ಅಮ್ಜದ್ ಪಟೇಲ್, ಬಳ್ಳಾರಿ ನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷ ಶ್ರೀ ಅಲ್ಲಂ ಪ್ರಶಾಂತ್ ಅವರು ಹಾಗೂ ವಿಜಯನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಕೆ ಎಂ ಹಾಲಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಿಂಬಗಲ್ ರಾಮಕೃಷ್ಣ, ವಿಜಯನಗರ ಜಿಲ್ಲೆಯ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರುಗಳಾದ ಅಟವಾಳಿಗಿ ಕೋಟ್ರೇಶ, ಕ್ವಾಲ್ವಿ ಹನುಮಂತಪ್ಪ , ಗುರುಸಿದ್ದನ ಗೌಡ , ವಿ.ಅಂಜಿನಪ್ಪ, ವಿನಾಯಕ ಶೆಟ್ಟರ್, ಸಿ.ಖಾಜಾ ಹುಸೇನ್, ಕೂಡ್ಲಿಗಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ಕಾಯುವಲ್ಲಿ ಶಿವಪ್ಪ ನಾಯಕ, ಕೆಪಿಸಿಸಿ ಮಹಿಳಾ ವಿಭಾಗದ ಉಪಾಧ್ಯಕ್ಷ ಶ್ರೀಮತಿ ನಾಗಮಣಿ ಜಿಂಕಲ್, ವಿಜಯನಗರ ಜಿಲ್ಲಾ ವಕ್ಫ್ ಸಲಹಾ ಸಮಿತಿ, ಪರಿಶಿಷ್ಟ ಜಾತಿ ವಿಭಾಗದ ಬಣ್ಣದ ಮನೆ ಸೋಮಶೇಖರ್, ಜಿಲ್ಲಾಧ್ಯಕ್ಷ ಕೆ.ಎಸ್.ದಾದಾಪೀರ, ಜಿಲ್ಲಾ ಸಮಿತಿ ಜಿಲ್ಲಾ ಪದಾಧಿಕಾರಿಗಳು, ವಿವಿಧ ಮುಂಚೂಣಿ ಘಟಕಗಳ ಜಾಲ್ಲಾಧ್ಯಕ್ಷರು, ಜಿಲ್ಲೆಯ ನಗರಸಭೆ, ಪುರಸಭೆ , ಪಟ್ಟಣ ಪಂಚಾಯತ್ ಸದ್ಯಸರು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು ಭಾಗವಹಿಸಿದ್ದರು.
ವರದಿ : ಜಿಲಾನಸಾಬ್ ಬಡಿಗೇರ್
