ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ವರದಿಯ ಫಲಶೃತಿ

ಶುದ್ಧ ಕುಡಿಯುವ ನೀರಿನ ಘಟಕ ದುರಸ್ತಿ ಪಡಿಸಿ ಸಾರ್ವಜನಿಕರ ಮೆಚ್ಚುಗೆ ಪಡೆದ ಅಧಿಕಾರಿಗಳು.

ಯಾದಗಿರಿ /ಗುರುಮಠಕಲ್ : ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ, ಗುರುಮಠಕಲ್ ಉಪ ಮಾರುಕಟ್ಟೆಯ ಪ್ರಾಂಗಣದಲ್ಲಿರುವ ಶುದ್ದ ಕುಡಿಯುವ ನೀರಿನ ಘಟಕ ದುರಸ್ತಿ ಕುರಿತಾಗಿ ಕಳೆದ ಏಪ್ರಿಲ್ 16 ರ ಕರುನಾಡ ಕಂದ ಸಂಚಿಕೆಯಲ್ಲಿ ವಿಸ್ತೃತ ವರದಿ ಪ್ರಕಟವಾಗಿತ್ತು. ಈ ವರದಿಯನ್ನು ಸ್ಥಳೀಯ ಹೋರಾಟಗಾರರು ತಮ್ಮ – ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡುವ ಮೂಲಕ ವೈರಲ್ ಕೂಡಾ ಮಾಡಿ ಪತ್ರಿಕೆಯ ವರದಿಗೆ ಮೆಚ್ಚುಗೆ ಹಾಗೂ ಸ್ಥಳೀಯ ಅಧಿಕಾರಿಗಳ, ಜನಪ್ರತಿನಿಧಿಗಳ ಗಮನಕ್ಕೆ ತಂದಿದ್ದರು.
ಈ ವರದಿಗೆ ಎಚ್ಚೆತ್ತು ಕಳೆದ ವಾರದಿಂದ ಕುಡಿಯುವ ನೀರಿನ ಘಟಕವನ್ನು ದುರಸ್ತಿಪಡಿಸಿ , ಇಲ್ಲಿ ಬರುವ ರೈತರಿಗೆ ನೀರಿನ ಸೌಲಭ್ಯ ಸಿಗುವಂತಾಗಿದೆ.
ಈ ಕುರಿತು ಕಾರ್ಯದರ್ಶಿಗಳಾದ ಶಿವಕುಮಾರ ದೇಸಾಯಿ ಮಾತನಾಡಿ ತಮ್ಮ ಮೂಲಕ ನಮಗೆ ಸಮಸ್ಯೆ ಕುರಿತು ಅರಿವಾಗಿದೆ, ಪ್ರತಿ ಬಾರಿ ಸಮಸ್ಯೆ ಆದಾಗ ತಾತ್ಕಾಲಿಕವಾಗಿ ಪರಿಹಾರ ಕಂಡುಕೊಳ್ಳದೆ, ಈ ಬಾರಿ ಮತ್ತೆ ಸಮಸ್ಯೆ ಬಾರದಂತೆ ಮುಂದೆ ನೋಡಿ ಕೊಳ್ಳಲಾಗುತ್ತದೆ ಎಂದು ಪತ್ರಿಕೆಗೆ ತಿಳಿಸಿದ್ದಾರೆ. ನಿರ್ವಾಹಕರಾದ ಜಗದೀಶ್ ಅವರು ಶುದ್ದ ನೀರಿನ ಘಟಕ ಪ್ರಾರಂಭವಾಗಿರುವುದು ಸಂತಸ ತಂದಿದೆ ಎಂದು ಹರ್ಷ ವ್ಯಕ್ತ ಪಡಿಸಿದರು.

ವರದಿ: ಜಗದೀಶ್ ಕುಮಾರ್ ಭೂಮಾ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!