ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

126 ವರ್ಷಗಳ ಹಳೆಯ, ಬ್ರಿಟಿಷ್ ಅಧಿಕಾರಿಗಳ ಮಕ್ಕಳು ಓದಿದ ಐತಿಹಾಸಿಕ ಕನ್ನಡ ಶಾಲೆಗೆ ಇದೆಂಥಾ ಸ್ಥಿತಿ..?

ಕೋಲಾರ : ಇದು ಚಿನ್ನದ ನಾಡಿನಲ್ಲಿರುವ ಒಂದು ಶತಮಾನದ ಇತಿಹಾಸ ಹೊಂದಿರುವ ಶಾಲೆ, ಈ ಶಾಲೆಯಲ್ಲಿ ಓದಿರುವ ಲಕ್ಷಾಂತರ ಜನ ವಿದ್ಯಾರ್ಥಿಗಳು ದೇಶ ವಿದೇಶಗಳಲ್ಲಿ ಉನ್ನತ ಸ್ಥಾನದಲ್ಲಿದ್ದಾರೆ. ಈ ಶಾಲೆಗೆ ಚಿನ್ನದ ಗಣಿ ನಡೆಯುತ್ತಿದ್ದ ಕಾಲದಲ್ಲಿ ಬ್ರಿಟಿಷ್ ಅಧಿಕಾರಿಗಳ ಮಕ್ಕಳು ಹಾಗೂ ಕಾರ್ಮಿಕರ ಮಕ್ಕಳು ಓದುತ್ತಿದ್ದ ಶಾಲೆ ಇದು. ಇಂತಹ ಇತಿಹಾಸವುಳ್ಳ ಶಾಲೆಯಲ್ಲಿ ಈ ಬಾರಿಯ ಎಸ್ಎಸ್ ಎಲ್ ಸಿ ಫಲಿತಾಂಶದಲ್ಲಿ ಶೂನ್ಯ ಸಾಧನೆ ಮಾಡುವ ಮೂಲಕ ಶತಮಾನದ ಶಾಲೆ ಮಂಕಾಗಿದೆ.

ಸುಮಾರು 126 ವರ್ಷಗಳ ಹಳೆಯ ಶಾಲೆ ಬ್ರಿಟೀಷರ ಕಾಲದಲ್ಲಿ ನಿರ್ಮಾಣವಾಗಿರುವ ಪುರಾತನ ಶಾಲೆ ಇದು. ಚಿನ್ನದ ಗಣಿ ನಡೆಯುತ್ತಿದ್ದ ಕಾಲದಲ್ಲಿ ಬ್ರಿಟಿಷ್ ಅಧಿಕಾರಿಗಳ ಮಕ್ಕಳು ಹಾಗೂ ಕಾರ್ಮಿಕರ ಮಕ್ಕಳು ಓದುತ್ತಿದ್ದ ಶಾಲೆ. ಅಷ್ಟೇ ಅಲ್ಲ ಕರ್ನಾಟಕದ ಪ್ರಥಮ ಇಂಗ್ಲೀಷ್ ಶಾಲೆ ಎನ್ನುವ ಹೆಗ್ಗಳಿಕೆ ಸಹ ಈ ಶಾಲೆಗಿದೆ. ಇಂತಹ ಇತಿಹಾಸವುಳ್ಳ ಕೋಲಾರ ಜಿಲ್ಲೆ ಕೆ ಜಿ ಎಫ್ ಬಿಜಿಎಂಎಲ್ ಫ್ರೌಡಶಾಲೆಯಲ್ಲಿ ಓದಿದವರು ದೊಡ್ಡ ದೊಡ್ಡ ಹುದ್ದೆಯಲ್ಲಿದ್ದಾರೆ. ಆದ್ರೆ, ದುರದೃಷ್ಟವಶಾತ್ ಎಂಬಂತೆ 2024ನೇ ಸಾಲಿನ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಈ ಶಾಲೆ ಕಳಪೆ ಪ್ರದರ್ಶನ ತೋರಿದೆ. ಹೌದು..ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆದಿದ್ದ ಈ ಶಾಲೆಯ ಒಟ್ಟು 38 ಕ್ಕೆ 38 ವಿದ್ಯಾರ್ಥಿಗಳು ಫೇಲ್ ಆಗಿದ್ದಾರೆ. ಈ ಮೂಲಕ ಮೊನ್ನೆ ಪ್ರಕಟಗೊಂಡ ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಈ ಶತಮಾನದ ಶಾಲೆ ಶೂನ್ಯ ಸಾಧನೆ ಮಾಡಿದೆ.

ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ..!

ಈ ಬಾರಿ ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ಜಿಲ್ಲೆಯಲ್ಲಿ ಶೂನ್ಯ ಫಲಿತಾಂಶ ಸಾಧನೆ ಮಾಡುವ ಮೂಲಕ ಸುದ್ದಿಯಲ್ಲಿದೆ. ಬಿಜಿಎಂಎಲ್ ಶಾಲೆಯಲ್ಲಿ 38 ಜನ ವಿದ್ಯಾರ್ಥಿಗಳು ಅಂದರೆ 24 ಜನ ಬಾಲಕರು ಹಾಗೂ 14 ಜನ ಬಾಲಕಿಯರು ಪರೀಕ್ಷೆ ಬರೆದಿದ್ದು, ಯಾರೊಬ್ಬರೂ ಪರೀಕ್ಷೆಯಲ್ಲಿ ಪಾಸ್ ಆಗಿಲ್ಲ ಇದರಿಂದ ಐತಿಹಾಸಿಕ ಹಿನ್ನೆಲೆ ಹೊಂದಿದ್ದ ಈ ಶಾಲೆಯು ಜಿಲ್ಲೆಯಲ್ಲಿ ತನ್ನ ಶೂನ್ಯ ಸಾಧನೆಯಿಂದ ಗಮನ ಸೆಳೆದಿದೆ.

ಶೂನ್ಯ ಫಲಿತಾಂಶಕ್ಕೆ HM ಕೊಟ್ಟ ಕಾರಣವೇನು..?

ಇನ್ನು ಈ ಬಗ್ಗೆ ಮಾತನಾಡಿರುವ ಶಾಲಾ ಪ್ರಾಂಶುಪಾಲರು, ಇಲ್ಲಿನ ಮಕ್ಕಳು ಎಲ್ಲರೂ ತಮಿಳು ಭಾಷಿಕರಿದ್ದು ಇವರಿಗೆ ಭಾಷೆ ಸಮಸ್ಯೆ ಜೊತೆಗೆ ಶಾಲೆಯಲ್ಲಿ ಬೋಧಕ ಸಿಬ್ಬಂದಿ ಕೊರತೆ ಇದೆ, ಜೊತೆಗೆ ಕೆಲವು ಆಡಳಿತಾತ್ಮಕ ಕಾರಣಗಳಿಂದ ಫಲಿತಾಂಶ ಕುಸಿದಿದೆ ಎಂದು ಶೂನ್ಯ ಫಲಿತಾಂಶಕ್ಕೆ ಕಾರಣ ನೀಡಿದ್ದಾರೆ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!