ಶಿವಮೊಗ್ಗ: ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಾನ್ಯ ಸಂಸದರ ಅಧ್ಯಕ್ಷತೆಯಲ್ಲಿ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಮೇಲ್ವಿಚಾರಣಾ ಸಮಿತಿಗಳ (ದಿಶಾ) ಸಭೆಯಲ್ಲಿ ಭಾಗವಹಿಸಿ, ಶಿವಮೊಗ್ಗ ನಗರಕ್ಕೆ ಸಂಬಂಧಿಸಿದ ಕೆಲ ಪ್ರಮುಖ ವಿಷಯಗಳನ್ನು ಪ್ರಸ್ತಾಪಿಸಿ, ಚರ್ಚಿಸಲಾಯಿತು.
- MRS ವೃತ್ತದಿಂದ ಮಲವಗೊಪ್ಪದವರೆಗೆ ಕುಡಿಯುವ ನೀರಿನ ಪೂರೈಕೆಗೆ ಸಂಬಂಧಿಸಿದ ರೈಸಿಂಗ್ ಮೆನ್ ( ಕುಡಿಯುವ ನೀರಿನ ಪೂರೈಕೆ) ಸಂಪರ್ಕಕ್ಕೆ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಯಿಂದ ಉಂಟಾಗುತ್ತಿರುವ ತೊಂದರೆಗಳಿಗೆ ಸಂಬಂಧಿಸಿದಂತೆ ಚರ್ಚಿಸಿ, ಇದಕ್ಕೆ ಬೇಕಾಗಿರುವ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಲಾಯಿತು.
- ಸಾರ್ವಜನಿಕರ ಸುರಕ್ಷತಾ ಹಿತ ದೃಷ್ಟಿಯಿಂದ ನಗರದ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಯ ಬೀದಿ ದೀಪಗಳ ಸಂಪರ್ಕ ಮತ್ತು ನಿರಂತರ ನಿರ್ವಹಣೆ ಮತ್ತು ದುರಸ್ತಿಯ ಅಗತ್ಯತೆ ಕುರಿತು ಚರ್ಚಿಸಲಾಯಿತು.
- ಅಲ್ಕೊಳ ವೃತ್ತದಿಂದ ಗಾಡಿಕೊಪ್ಪದವರೆಗೆ ನಡೆದ ಹೆದ್ದಾರಿ ಕಾಮಗಾರಿಯ ಸಂದರ್ಭದಲ್ಲಿ ಸ್ಥಳೀಯ ನಿವಾಸಿಗಳು ಹಾಗೂ ವ್ಯಾಪಾರಿಗಳಿಗೆ ಪರಿಹಾರ ನೀಡುವಲ್ಲಿ ಎದುರಾಗುತ್ತಿರುವ ಅಡೆತಡೆಗಳಿಗೆ ತ್ವರಿತ ಮತ್ತು ಪರಿಣಾಮಕಾರಿಯಾದ ಪರಿಹಾರ ಕ್ರಮ ಕೈಗೊಳ್ಳುವಂತೆ ಸಂಬಂಧಿತ ಅಧಿಕಾರಿಗಳ ತಿಳಿಸಲಾಯಿತು.
ವರದಿ: ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ
