ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

“ಜಾಗತೀಕರಣದ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಿ” – ಮಂಜುನಾಥ ಉಲವತ್ತಿ ಶೆಟ್ಟರ್

ಬಳ್ಳಾರಿ / ಕಂಪ್ಲಿ : ಜಾಗತೀಕರಣ ಹಲವಾರು ಅವಕಾಶಮತ್ತು ಸಾಧ್ಯತೆಗಳನ್ನು ಒದಗಿಸಿದೆ. ನಮ್ಮ ಯುವ ಜನಾಂಗ ಅದರ ಸದುಪಯೋಗ ಪಡಿಸಿಕೊಳ್ಳಬೇಕೆಂದು ಪ್ರಾಧ್ಯಾಪಕರು ಹಾಗೂ ಅಂಕಣಕಾರರು ಆದ ಮಂಜುನಾಥ ಉಲವತ್ತಿ ಶೆಟ್ಟರ್ ಅವರು ಅಭಿಪ್ರಾಯಪಟ್ಟರು.
ಸರಕಾರಿ ಪ್ರಥಮ ದರ್ಜೆ ಕಾಲೇಜು ಕಂಪ್ಲಿಯಲ್ಲಿ ನಿನ್ನೆ ದಿನಾಂಕ 6.5.2925 ಆಂತರಿಕ ಗುಣಮಟ್ಟ ಭರವಸಾ ಕೋಶದ ಅಡಿಯಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಉಪನ್ಯಾಸ ಕಾರ್ಯಕ್ರಮದಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಗಂಗಾವತಿಯ ರಾಜ್ಯಶಾಸ್ತ ವಿಷಯದ ಸಹಾಯಕ ಪ್ರಾಧ್ಯಾಪಕರಾದ ಬಾರಿಕರ ಫಣಿರಾಜ ಅವರು “ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ರಾಜ್ಯಶಾಸ್ತ ಅಧ್ಯಯನ ಮಹತ್ವ” ಕುರಿತು ಉಪನ್ಯಾಸ ನೀಡಿದರು. ಎಲ್ಲಾ ರೀತಿಯ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ರಾಜ್ಯಶಾಸ್ತ ವಿಷಯದ ಅನೇಕ ಪ್ರಶ್ನೆಗಳು ಬರುತ್ತವೆ. ವಿದ್ಯಾರ್ಥಿಗಳು ರಾಜ್ಯಶಾಸ್ತ್ರವನ್ನು ಆಳವಾಗಿ ಅಧ್ಯಯನ ಮಾಡುವುದರಿಂದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ತೇರ್ಗಡೆಯಾಗಲು ಸಹಾಯಕವಾಗುತ್ತದೆ ಎಂದು ಅವರು ಈ ಸಂದರ್ಭದಲ್ಲಿ ಅಭಿಪ್ರಾಯ ಪಟ್ಟರು.

ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಗರಿಬೊಮ್ಮನಹಳ್ಳಿಯ ಸಹ ಪ್ರಾಧ್ಯಾಪಕರಾದ ಮಂಜುನಾಥ ಉಲವತ್ತಿ ಶಟ್ಟರ್ ರವರು “ಜಾಗತೀಕರಣ ನಂತರದ ಬೆಳವಣಿಗೆ ಮತ್ತು ಸವಾಲುಗಳು” ಕುರಿತು ವಿಶೇಷ ಉಪನ್ಯಾಸ ನೀಡಿದರು. ಜಾಗತೀಕರಣ ಕೇವಲ ಸಮಸ್ಯೆಗಳನ್ನು ತಂದಿಲ್ಲ. ಅದು ಅವಕಾಶಗಳನ್ನು ಸಹ ನಮ್ಮ ಮುಂದಿಟ್ಟಿದೆ. ಈ ಅವಕಾಶಗಳನ್ನು ನಮ್ಮದಾಗಿಸಿಕೊಳ್ಳುವ ಸಾಮಾರ್ಥ್ಯವನ್ನು ನಮ್ಮ ವಿದ್ಯಾರ್ಥಿಗಳು ಪಡೆದುಕೊಳ್ಳಬೇಕೆಂದು ಅವರು ಅಭಿಪ್ರಾಯಪಟ್ಟರು. ವಿದ್ಯಾರ್ಥಿಗಳಲ್ಲಿ ನಿರಂತರ ಅಧ್ಯಯನ, ಆಸಕ್ತಿ, ಮತ್ತು ಜಾಗೃತಿಗಳನ್ನು ಹೊಂದಿದ್ದರೆ ಅವು ಹಲವಾರು ಅವಕಾಶಗಳನ್ನು ತೆರೆದಿಡುತ್ತವೆ ಎಂದು ಅವರು ಈ ಸಂದರ್ಭದಲ್ಲಿ ಅಭಿಪ್ರಾಯ ಪಟ್ಟರು.

ಈ ದಿನದ ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಶ್ರೀ ಬಾಲಾಜಿ. ಎಂ. ಪಿ. ಆಂತರಿಕ ಗುಣಮಟ್ಟ ಕೋಶದ ಸಂಚಾಲಕರಾದ ಡಾ.ಕೆ ಮಹೇಶ್, ಅಧ್ಯಾಪಕರುಗಳಾದಡಾ.ಜೆ.ಕೃಷ್ಣ, ಡಾ.ಅನ್ನಪೂರ್ಣಗುಡದೂರು, ರಾಜ್ಮಾ ಟಿ.ಎಂ.ಆರ್. ಶ್ರೀಮತಿ ಮಮತ, ಜಿ.ಎಂ, ಗ್ರಂಥಪಾಲಕರು ಎ.ಜಿ ವೀರಭದ್ರಪ್ಪ ಹಾಗೂ ಅತಿಥಿ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ