ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ರೌಡಿ ಚಟುವಟಿಕೆ : ಮೈಸೂರಿನಲ್ಲಿ ವಿಶೇಷ ಪೋಲಿಸ್ ತಂಡ ರಚನೆಗೆ ತೇಜಸ್ವಿ ಮನವಿ

ಮೈಸೂರು: ಮಂಗಳೂರಿನಲ್ಲಿ ನಡೆದ ರೌಡಿ ಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ರಚನೆ ಮಾಡಿದ ಮಾದರಿಯಲ್ಲೇ ಮೈಸೂರಿನಲ್ಲೂ ವಿಶೇಷ ಪೋಲಿಸ್ ತಂಡ ರಚನೆ ಮಾಡುವಂತೆ ಕನ್ನಡ ಚಳುವಳಿಗಾರ ತೇಜಸ್ವಿ ನಾಗಲಿಂಗ ಸ್ವಾಮಿ ಗೃಹಸಚಿವರನ್ನು ಆಗ್ರಹಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ರೀತಿಯಲ್ಲೇ ಮೈಸೂರಿನಲ್ಲಿ ಯೂ ಸಹ ಈ ಹಿಂದೆ ಅನೇಕ ಕೋಮು ಸೌಹಾರ್ದತೆಗೆ ಧಕ್ಕೆ ಉಂಟಾಗುವಂತಹ ಘಟನೆಗಳು ನಡೆದಿತ್ತು ಅಲ್ಲದೆ ಹತ್ಯೆಗಳೂ ನಡೆದಿತ್ತು ಎಂದು ತೇಜಸ್ವಿ ಸ್ಮರಿಸಿದ್ದಾರೆ.

ಮೈಸೂರು ಕೂಡಾ ಸೂಕ್ಷ್ಮಾತಿ ಸೂಕ್ಷ್ಮ ಪ್ರದೇಶವಾಗಿದ್ದು ಕ್ಯಾತಮಾರನಹಳ್ಳಿಯಲ್ಲಿ ರಾಜು ಹತ್ಯೆ ಪ್ರಕರಣ ಮತ್ತು ಮೊನ್ನೆ ನಡೆದಂತಹ ಉದಯಗಿರಿ ಪೋಲಿಸ್ ಠಾಣೆಯ ಮೇಲೆ ಕಲ್ಲು ತೂರಾಟ ಮತ್ತು ಮಸೀದಿ ಘಟನೆಗಳು ನಡೆದಿದ್ದವು.

ಇದನ್ನು ಮೀರಿ ಮೈಸೂರು ನಗರ ಮತ್ತು ಜಿಲ್ಲೆಯಲ್ಲಿ ಮಿತಿಮೀರಿದ ರೌಡಿ ಶೀಟರ್ ಗಳ ಗ್ಯಾಂಗ್ ವಾರ್ ಮತ್ತು ರೌಡಿ ಶೀಟರ್ ಗಳಿಂದ ಬರುತ್ತಿರುವ ಹಫ್ತಾ ವಸೂಲಿ ಬೆದರಿಕೆ ಪ್ರಕರಣಗಳು ಕಳೆದ ಕೆಲವು ವರ್ಷಗಳಲ್ಲಿ ಹತ್ಯೆ ಮಾಡಿರುವ ಘಟನೆಗಳು ಇನ್ನೂ ಮಾಸಿಲ್ಲ, ಇಂತಹ ಘಟನೆಗಳು ಇಂದಿಗೂ ಕೂಡ ನಿರಂತರ ವಾಗಿದೆ ಎಂದು ಕನ್ನಡ ಚಳವಳಿಗಾರ ತೇಜಸ್ವಿ ನಾಗಲಿಂಗ ಸ್ವಾಮಿ ಆತಂಕ ವ್ಯಕ್ತಪಡಿಸಿದ್ದಾರೆ.

ನಿನ್ನೆ ಮಧ್ಯರಾತ್ರಿ ಕೂಡ ಕ್ಯಾತಮಾರನಹಳ್ಳಿಯಲ್ಲಿ ರೌಡಿ ಶೀಟರ್ ಕಾರ್ತಿಕ್ ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವುದು ಸಾರ್ವಜನಿಕರಲ್ಲಿ ಭಯದ ವಾತಾವರಣ ಉಂಟುಮಾಡಿದೆ ಎಂದು ತಿಳಿಸಿದ್ದಾರೆ.

ಅವಕಾಶವಿದ್ದರೆ ರೌಡಿ ಶೀಟರ್ ಗಳನ್ನು ಗುರುತಿಸಿ ಗಡಿಪಾರು ಮಾಡುವಂತೆ ತೇಜಸ್ವಿ ಮನವಿ ಮಾಡಿದ್ದಾರೆ.

ಈ ಮೇಲಿನ ಎಲ್ಲಾ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ರೌಡಿ ಶೀಟರ್ ಮತ್ತು ಅವರ ಸಹಚರರ ಚಲನವಲನಗಳನ್ನು ಗಮನಿಸಿ ರೌಡಿ ಚಟುವಟಿಕೆಗಳನ್ನು ಮೈಸೂರು ಮಹಾನಗರದಲ್ಲಿ ಸಂಪೂರ್ಣ ಮಟ್ಟ ಹಾಕಲು ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಮಂಗಳೂರು ಮತ್ತು ಉಡುಪಿ ಮಾದರಿಯಲ್ಲಿ ವಿಶೇಷ ಪೋಲಿಸ್ ತಂಡ ರಚನೆ ಮಾಡಬೇಕು ಎಂದು ತೇಜಸ್ವಿ ನಾಗಲಿಂಗ ಸ್ವಾಮಿ ಗೃಹ ಸಚಿವರು ಮತ್ತು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ