ಕಾಶ್ಮೀರ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಪ್ರತೀಕಾರವಾಗಿ ಭಾರತ ಬುಧವಾರ “ಆಪರೇಷನ್ ಸಿಂಧೂರ್” ಕಾರ್ಯಾಚರಣೆ ಕೈಗೊಂಡಿದೆ.
ಆಪರೇಷನ್ ಸಿಂಧೂರ್:
ಉಗ್ರರು ಭಾರತದ ಹಿಂದೂ ಮಹಿಳೆಯರ ಕುಂಕುಮ ಅಳಿಸಿದ್ದಕ್ಕೆ ಭಾರತವು ಪ್ರತೀಕಾರ ತೀರಿಸಿಕೊಂಡಿದೆ. ಅದಕ್ಕೆ ಆಪರೇಷನ್ ಸಿಂಧೂರ್ ಎಂದು ಹೆಸರಿಟ್ಟು, ಪಾಕಿಸ್ತಾನದ ಮೇಲೆ 9 ಕಡೆಗಳಲ್ಲಿ ದಾಳಿ ನಡೆಸಿದೆ. ಮಂಗಳವಾರ ರಾತ್ರಿ ಭಾರತ ಪಾಕಿಸ್ತಾನ ಮತ್ತು ಪಿಒಕೆಯಲ್ಲಿ ಒಂಬತ್ತು ಸ್ಥಳಗಳಲ್ಲಿ ದಾಳಿ ನಡೆಸಿದೆ. ಪ್ರಾಥಮಿಕ ಅಂದಾಜಿನ ಪ್ರಕಾರ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು 12 ಜನರು ಗಾಯಗೊಂಡಿದ್ದಾರೆ ಎಂದು ಪಾಕಿಸ್ತಾನ ತಿಳಿಸಿದೆ.
ಇದು ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (PoK) ಒಳಗೆ ಇದ್ದ 9 ಭಯೋತ್ಪಾದಕ ನೆಲೆಗಳನ್ನು ಯಶಸ್ವಿಯಾಗಿ ನಾಶಪಡಿಸಿದೆ. ಸೇನೆ, ನೌಕಾಪಡೆ ಮತ್ತು ವಾಯುಪಡೆಯಿಂದ ಜಂಟಿಯಾಗಿ ಈ ಕಾರ್ಯಾಚರಣೆ ನಡೆಯಿತು. ಭಾರತದ ನೆಲದಿಂದಲೇ ಇದನ್ನು ಈ ಕಾರ್ಯಾಚರಣೆ ನಡೆಸಲಾಗಿದೆ.
ರಕ್ಷಣಾ ಸಚಿವಾಲಯದ ಪ್ರಕಾರ, “ಆಪರೇಷನ್ ಸಿಂಧೂರ್ ಗಮನ ಕೇಂದ್ರೀಕರಿಸಿದ್ದು, ಸೀಮಿತವಾಗಿತ್ತು ಮತ್ತು ಇದರ ವ್ಯಾಪ್ತಿ ಹಾಗೂ ಪರಿಣಾಮ ಹೆಚ್ಚಾಗದಂತೆ ನೋಡಿಕೊಳ್ಳಲಾಗಿತ್ತು”. ಯಾವುದೇ ಪಾಕಿಸ್ತಾನದ ಮಿಲಿಟರಿ ನೆಲೆಗಳಿಗೂ ಹಾನಿ ಆಗದಂತೆ ಎಚ್ಚರಿಕೆ ವಹಿಸಲಾಗಿತ್ತು.
ಭಾರತದ ಗುಪ್ತಚರ ಸಂಸ್ಥೆಗಳು ಭಯೋತ್ಪಾದಕರ ನಿಖರವಾದ ಸ್ಥಳವನ್ನು ತಿಳಿಸಿದ್ದವು. ಭಾರತೀಯ ಪಡೆಗಳು ಜೈಶ್-ಎ-ಮೊಹಮ್ಮದ್ (JeM) ಮತ್ತು ಲಷ್ಕರ್-ಎ-ತೊಯ್ಬಾ (LeT) ನಾಯಕರನ್ನು ಗುರಿಯಾಗಿಸಲು ಸ್ಥಳಗಳನ್ನು ಆಯ್ಕೆ ಮಾಡಿಕೊಂಡಿದ್ದವು. ಈ ಸಂಘಟನೆಗಳು ಭಾರತದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ಪ್ಲಾನ್ ಮಾಡಿದ್ದವು. ಮೂರು ಪಡೆಗಳು – ಭಾರತೀಯ ಸೇನೆ, ನೌಕಾಪಡೆ ಮತ್ತು ವಾಯುಪಡೆ – ಜಂಟಿಯಾಗಿ ಕಾರ್ಯಾಚರಣೆ ನಡೆಸಿದವು. ವಿಶೇಷ ನಿಖರ ಮದ್ದು ಗುಂಡುಗಳನ್ನು ಬಳಸಿ ಭಯೋತ್ಪಾದಕರ ಶಿಬಿರಗಳ ಮೇಲೆ ದಾಳಿ ಮಾಡಲಾಯಿತು. ಭಾರತೀಯ ಪಡೆಗಳು ಯಶಸ್ವಿಯಾಗಿ ಒಂಬತ್ತು ಉಗ್ರನೆಲೆಗಳನ್ನು ನಾಶ ಮಾಡಿದ್ದು, ಅದರಲ್ಲಿ ನಾಲ್ಕು ಪಾಕಿಸ್ತಾನದಲ್ಲಿ ಮತ್ತು ಐದು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಇದ್ದವು.
ರಕ್ಷಣಾ ಸಚಿವಾಲಯವು ಮಧ್ಯರಾತ್ರಿ 1:44 ಗೆ ನೀಡಿದ ಹೇಳಿಕೆಯಲ್ಲಿ, ಈ ಕಾರ್ಯಾಚರಣೆಯನ್ನು “ಗಮನ ಕೇಂದ್ರೀಕರಿಸಿದ್ದು, ಸೀಮಿತ ಮತ್ತು ಉಲ್ಬಣಗೊಳ್ಳದಂತೆ ನೋಡಿಕೊಳ್ಳಲಾಗಿತ್ತು” ಎಂದು ವಿವರಿಸಿದೆ. ಪಿಟಿಐ ವರದಿ ಪ್ರಕಾರ, ಬಹವಾಲ್ಪುರ್‌ನಲ್ಲಿರುವ ಜೈಷ್‌ಎ ಮೊಹಮ್ಮದ್ ನ ಪ್ರಧಾನ ಕಛೇರಿ ಮತ್ತು ಮುರಿದ್ಕೆಯಲ್ಲಿರುವ ಲಷ್ಕರ್ ಎ ತೊಯ್ಬಾ ನ ನೆಲೆಯನ್ನು ಗುರಿಯಾಗಿಸಲಾಯಿತು. ಏಪ್ರಿಲ್ 22 ರಂದು ಪಹಲ್ಗಾಮ್‌ನಲ್ಲಿ ನಡೆದ ಭಯಾನಕ ದಾಳಿಗೆ ಪ್ರತೀಕಾರವಾಗಿ ಈ ಕಾರ್ಯಾಚರಣೆ ನಡೆಯಿತು.
ವರದಿ : ಜಿಲಾನಸಾಬ್ ಬಡಿಗೇರ್
