ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ರಾವಂದೂರು ಬಸ್ ನಿಲ್ದಾಣದಲ್ಲಿ ಶೌಚಾಲಯ ಮುಚ್ಚಿ ನಿರುಪಯುಕ್ತವಾಗಿರುವುದರಿಂದ ಸಾರ್ವಜನಿಕರು ಟಿ.ಸಿ ಆಫೀಸ್ ಪಕ್ಕದಲ್ಲಿ ಮೂತ್ರ ವಿಸರ್ಜನೆ ಮಾಡುತ್ತಾರೆ. ಬಸ್ ನಿಲ್ದಾಣದಲ್ಲಿ ಶೌಚಾಲಯ ಇದ್ದರೂ ಸಹ ಮುಚ್ಚಿರುವುದು ಸಾರ್ವಜನಿಕರಿಗೆ ಕಿರಿಕಿರಿಯಾಗುತ್ತಿದೆ ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ಎದುರಾಗಿದ್ದು ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಗಮನ ಹರಿಸಿ ಶೌಚಾಲಯವನ್ನು ಪುನಃ ಬಳಕೆಗೆ ಅನುಕೂಲ ಮಾಡಿಕೊಡಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ವರದಿ ಹೆಚ್. ಆರ್. ಶಂಕರ್
