ಹೊಸದಿಲ್ಲಿ: ಭಾರತೀಯ ಸೇನೆಯ ಕರ್ನಲ್ ಸೋಫಿಯಾ ಖುರೇಷಿ ಆಪರೇಷನ್ ಸಿಂಧೂರ್’ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದರು.
ಕರ್ನಲ್ ಸೋಫಿಯಾ ಖುರೇಷಿ ಅವರು ಭಾರತೀಯ ಸೇನೆಯಲ್ಲಿ ನೀಡಿರುವ ಕೊಡುಗೆ ಮತ್ತು ಸೇವೆಯೂ ದೇಶದ ಗಮನ ಸೆಳೆದಿದೆ.
ಭಾರತೀಯ ಸೇನೆಯ ಕಾರ್ಪ್ಸ್ ಆಫ್ ಸಿಗ್ನಲ್ಸ್ ವಿಭಾಗದ ಅಧಿಕಾರಿಯಾಗಿರುವ ಕರ್ನಲ್ ಸೋಫಿಯಾ ಖುರೇಷಿ ಅವರು ಅಗ್ನಿಶಾಮಕ ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಮೊದಲ ಮಹಿಳಾ ಅಧಿಕಾರಿಯಾಗಿದ್ದಾರೆ. ಆಸಿಯಾನ್ (ASEAN) ರಾಷ್ಟ್ರಗಳೊಂದಿಗೆ ನಡೆದ ಬಹುರಾಷ್ಟ್ರೀಯ ಫೀಲ್ಡ್ ವ್ಯಾಯಾಮದಲ್ಲಿ ಭಾರತೀಯ ಸೇನಾ ತರಬೇತಿ ತಂಡವನ್ನು ಮುನ್ನಡೆಸಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಕರ್ನಲ್ ಸೋಫಿಯಾ ಖುರೇಷಿ ಅವರು ಸೇನಾ ಕುಟಂಬದಿಂದ ಬಂದವರು. ಸೋಫಿಯಾ ಅವರ ಅಜ್ಜ ಸೈನ್ಯದಲ್ಲಿ ಸೇವೆ ಸಲ್ಲಿಸಿದ್ದಾರೆ. ಪತಿ ಕೂಡ ಭಾರತೀಯ ಸೇನೆಯಲ್ಲಿ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಅವರು ಬೆಳಗಾವಿಯ ಸೊಸೆ ಅನ್ನೋದು ಎಲ್ಲರಿಗೂ ಗೊತ್ತಾಗಿದೆ. ಅವರ ಪತಿ ಕರ್ನಲ್ ತಾಜುದ್ದೀನ್ ಬಾಗೇವಾಡಿ ಅವರ ಹುಟ್ಟೂರು ಕೊಣ್ಣೂರಲ್ಲಿರುವ ಬೆಳಗಾವಿ ಮನೆಯಲ್ಲಿ ಕರ್ನಲ್ ತಾಜುದ್ದೀನ್, ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮತ್ತು ಪತ್ನಿ ಸೋಫಿಯಾ ಅವರೊಂದಿಗಿರುವ ಫೋಟೋ ಫ್ರೇಮ್ ಇದೆ, ಊರಿನ ಜನ ಮನೆಗೆ ಆಗಮಿಸಿ ತಾಜುದ್ದೀನ್ ಕುಟುಂಬಕ್ಕೆ ಅಭಿನಂದನೆಗಳನ್ನು ಸಲ್ಲಿಸುತ್ತಿದ್ದಾರೆ.
ವರದಿ : ಜಿಲಾನಸಾಬ್ ಬಡಿಗೇರ್
