ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಬೆಳಗ್ಗೆ ಅಥವಾ ಸಂಜೆ, ಮಧುಮೇಹ ಇರುವವರು ಹಾಗಲಕಾಯಿ ಜ್ಯೂಸ್ ಅನ್ನು ಯಾವಾಗ ಕುಡಿಯಬೇಕು?

ಹಸು ಕಪ್ಪಾದರೂ ಹಾಲು ಬಿಳುಪು ಎಂಬಂತೆ ಹಾಗಲಕಾಯಿ ಇತರ ತರಕಾರಿಗಳಿಗೆ ಹೋಲಿಸಿದರೆ ತುಂಬಾನೇ ಕಹಿಯಾದರೂ ಅದರ ಆರೋಗ್ಯ ಪ್ರಯೋಜನಗಳು ಮಾತ್ರ ಅಪಾರ! ಇಂದಿನ ಲೇಖನದಲ್ಲಿ ಹಾಗಲಕಾಯಿ ರಸವನ್ನು ಕುಡಿಯುವುದರಿಂದಾಗುವ ಪ್ರಯೋಜನಗಳ ಬಗ್ಗೆ ಮತ್ತು ಯಾವ ಸಮಯದಲ್ಲಿ ಕುಡಿಯುವುದು ಒಳ್ಳೆಯದು ಎಂಬುದರ ಕುರಿತು ತಜ್ಞರಿಂದ ತಿಳಿದುಕೊಳ್ಳೋಣ.

ಕೆಲವೊಂದು ಆಹಾರಗಳು, ಹಣ್ಣು ತರಕಾರಿಗಳು ಅದರಕ್ಕೆ ಕಹಿಯಾಗಿದ್ದರೂ ಉದರಕ್ಕೆ ಸಿಹಿಯಾಗಿರುತ್ತವೆ. ಆರೋಗ್ಯಕ್ಕೆ ಹೇರಳವಾದ ಪ್ರಯೋಜನಗಳನ್ನು ನೀಡುವ ಕೆಲವು ತರಕಾರಿಗಳ ರುಚಿ ಚೆನ್ನಾಗಿರುವುದಿಲ್ಲ. ಅಂತಹ ತರಕಾರಿಗಳಲ್ಲಿ ಹಾಗಲಕಾಯಿ ಕೂಡ ಒಂದು. ರುಚಿಯಲ್ಲಿ ಕಹಿಯಾಗಿರುವ ಹಾಗಲಕಾಯಿ ಆರೋಗ್ಯಕ್ಕೆ ಬಹಳ ಒಳ್ಳೆಯದು.

ಇದನ್ನು ಕನ್ನಡದಲ್ಲಿ ಹಾಗಲಕಾಯಿ, ಇಂಗ್ಲೀಷ್‌ನಲ್ಲಿ ಬಿಟರ್‌ ಅಥವಾ ಬಿಟರ್‌ ಗಾರ್ಡ್‌, ಹಿಂದಿಯಲ್ಲಿ ಕರೆಲಾ ಎಂದು ಕರೆಯುತ್ತಾರೆ. ತನ್ನಲ್ಲಿ ಹಲವಾರು ಬಗೆಯ ಆರೋಗ್ಯ ಪ್ರಯೋಜನಗ ಳನ್ನು ಒಳಗೊಂಡಿರುವ ಈ ತರಕಾರಿ ಪ್ರಮುವಾಗಿ ದೇಹದ ರಕ್ತದಲ್ಲಿನ ಸಕ್ಕರೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಏಕೆಂದರೆ ಹಾಗಲಕಾಯಿಯು ಇನ್ಸುಲಿನ್‌ನಂತೆ ಕಾರ್ಯನಿರ್ವಹಿಸುವ ಗುಣಲಕ್ಷಣಗಳನ್ನು ಹೊಂದಿದೆ.

ಹಾಗಲಕಾಯಿಯಲ್ಲಿ ಕಂಡು ಬರುವ ಪೋಷಕಾಂಶಗಳು ಇನ್ನು ಈ ತರಕಾರಿಯಲ್ಲಿ ಕಂಡು ಬರುವ ಪೌಷ್ಟಿಕ ಸತ್ವಗಳ ಬಗ್ಗೆ ನೋಡುವುದಾದರೆ, ತನ್ನಲ್ಲಿ ಹೇರಳವಾಗಿ ಮೆಗ್ನೀಸಿಯಮ್, ಪೊಟ್ಯಾಶಿಯಮ್, ಫೋಲೇಟ್, ಜಿಂಕ್, ಕಬ್ಬಿಣ, ವಿಟಮಿನ್ ಎ ಹಾಗೂ ವಿಟಮಿನ್ ಸಿ ನಂತಹ ಹಲವಾರು ಪ್ರಮುಖ ಪೋಷಕಾಂಶ ಗಳನ್ನು ಒಳಗೊಂಡಿರುತ್ತದೆ. ಇದು ಆಹಾರದಲ್ಲಿ ನಾರಿನ ಅಂಶದ ಅತ್ಯುತ್ತಮ ಮೂಲ ಎಂದು ಗುರುತಿಸಿಕೊಂಡಿದೆ.
ಇದು ಕ್ಯಾಲ್ಸಿಯಂ, ಪೊಟ್ಯಾಸಿಯಮ್ ಮತ್ತು ಬೀಟಾ-ಕ್ಯಾರೋಟಿನ್ ಮಟ್ಟವನ್ನು ಇತರ ಯಾವುದೇ ತರಕಾರಿ ಮತ್ತು ಹಣ್ಣುಗಳಿಗಿಂತ ಎರಡು ಪಟ್ಟು ಹೆಚ್ಚಾಗಿ ಹೊಂದಿರುತ್ತದೆ.
ಹೀಗಾಗಿ ಈ ತರಕಾರಿ ಯನ್ನು ಇದನ್ನು ಸರಿಯಾದ ಪ್ರಮಾಣದಲ್ಲಿ ಮತ್ತು ರೀತಿಯಲ್ಲಿ ಸೇವಿಸಿದರೆ, ಅದು ಆರೋಗ್ಯಕ್ಕೆ ಹಲವು ವಿಧಗಳಲ್ಲಿ ಪ್ರಯೋಜನ ಕಾರಿಯಾಗಿದೆ. ಇದರಲ್ಲಿರುವ ಪೋಷಕಾಂಶಗಳು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಈ ಬಗ್ಗೆ ತಜ್ಞರು ಏನು ಹೇಳುತ್ತಾರೆ?
ಪ್ರತಿ ದಿನ ಹಾಗಲಕಾಯಿ ರಸವನ್ನು ಕುಡಿಯುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ಕಡಿಮೆ ಆಗುತ್ತದೆ ಮತ್ತು ಚಯಾಪಚಯ ಕ್ರಿಯೆ ಹೆಚ್ಚಾಗುತ್ತದೆ ಎಂದು ಆಹಾರ ತಜ್ಞೆ ಸುರಭಿ ಪರೀಕ್ ಹೇಳುತ್ತಾರೆ. ಇದು ಜೀರ್ಣಕ್ರಿಯೆ ಮತ್ತು ಚರ್ಮವನ್ನು ಸುಧಾರಿಸಲು ಸಹ ಒಳ್ಳೆಯದು ಎಂದು ಪರಿಗಣಿಸಲಾಗಿದೆ.
ಅದರಲ್ಲೂ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಹಾಗಲಕಾಯಿ ರಸ ಕುಡಿಯುವುದು ಪ್ರಯೋಜನಕಾರಿ ಎಂದು ತಜ್ಞರು ಹೇಳುತ್ತಾರೆ. ಯಾಕೆಂದ್ರೆ ಈ ಸಮಯದಲ್ಲಿ ದೇಹವು ಹಾಗಲಕಾಯಿಯಲ್ಲಿರುವ ಪೋಷಕಾಂಶಗಳನ್ನು ಸರಿಯಾಗಿ ಹೀರಿಕೊಳ್ಳಲು ಸಹಾಯ ಮಾಡುತ್ತದೆ. ಆದರೆ ಮಧುಮೇಹಿಗಳು ಈ ಮನೆಮದ್ದನ್ನು ಅನುಸರಿಸುವ ಮೊದಲು ಒಮ್ಮೆ ವೈದ್ಯರ ಸಲಹೆ ಪಡೆದುಕೊಂಡರೆ ಒಳ್ಳೆಯದು.

ಪಾಲಿಪೆಪ್ಟೈಡ್-ಪಿ ಹಾಗಲಕಾಯಿಯಲ್ಲಿ ಕಂಡುಬರುತ್ತದೆ. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುವ ಒಂದು ರೀತಿಯ ಪ್ರೋಟೀನ್ ಆಗಿದೆ. ಆದ್ದರಿಂದ, ಹಾಗಲಕಾಯಿ ರಸವನ್ನು ಕುಡಿಯುವುದು ರಕ್ತದಲ್ಲಿನ ಸಕ್ಕರೆ ಮಟ್ಟ ಹೆಚ್ಚಿರುವ ಜನರಿಗೆ ಪ್ರಯೋಜನಕಾರಿಯಾಗಿದೆ.
ಇನ್ನು ಈ ತರಕಾರಿಯ ಜ್ಯೂಸ್ ಮಾಡಿ ಕುಡಿಯುವುದರಿಂದ ಚಯಾ ಪಚಯ ಕ್ರಿಯೆ ಹೆಚ್ಚಾಗುತ್ತದೆ. ಪ್ರಮುಖವಾಗಿ ಈ ತರಕಾರಿಯಲ್ಲಿ ಕಡಿಮೆ ಪ್ರಮಾಣದಲ್ಲಿ ಕ್ಯಾಲೋರಿ ಹಾಗೂ ಅಧಿಕ ಪ್ರಮಾಣದಲ್ಲಿ ನಾರಿನಾಂಶ ಕಂಡು ಬರುವುದರಿಂದ, ಇದು ದೇಹದ ತೂಕವನ್ನು ಇಳಿಸಿಕೊಳ್ಳಲು ಸಹಾಯ ಮಾಡುತ್ತದೆ.ಫೈಬರ್ ಅಥವಾ ನಾರಿನಾಂಶ ಹೆಚ್ಚಿರುವ ಆಹಾರಗಳ ಸೇವನೆಯಿಂದ ಹೊಟ್ಟೆ ತುಂಬಿದ ಅನುಭವವಾಗುತ್ತದೆ ಮತ್ತು ಕ್ಯಾಲೋರಿ ಸೇವನೆಯೂ ಕಡಿಮೆಯಾಗುತ್ತದೆ.

ಈ ಲೇಖನವು ಕೇವಲ ಮಾಹಿತಿಗಾಗಿ ಮಾತ್ರ. ಇದು ಯಾವುದೇ ರೀತಿಯಲ್ಲೂ ಯಾವುದೇ ಔಷಧಿ ಅಥವಾ ಚಿಕಿತ್ಸೆಗೆ ಪರ್ಯಾಯವಲ್ಲ.

  • ಜಿಲಾನಸಾಬ್ ಬಡಿಗೇರ್
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ