
ಯಾದಗಿರಿ/ ಗುರುಮಠಕಲ್: ಗುರುಮಠಕಲ್ ತಾಲೂಕಿನಾದ್ಯಂತ ನಿನ್ನೆ ವಿವಿದೆಡೆ ಮಹಾಸಾದ್ವಿ ಹೇಮರೆಡ್ಡಿ ಮಲ್ಲಮ್ಮನವರ 603 ನೇಯ ಜಯಂತಿಯನ್ನು ಅತ್ಯಂತ ಸರಳವಾಗಿ ಹಾಗೂ ಭಕ್ತಿ ಪೂರ್ವಕವಾಗಿ ಆಚರಿಸಲಾಯಿತು.
ಗುರುಮಠಕಲ್ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಸ್ ಘಟಕದ ಅಧಿಕಾರಿಗಳು ಮತ್ತು ಸಿಬ್ಬಂದಿ ಜಯಂತಿ ಆಚರಣೆ ಮಾಡಿದರು.
ಶ್ರೀ ಲಕ್ಷ್ಮೀ ವೆಂಕಟೇಶ್ವರ ಪಬ್ಲಿಕ್ ಶಾಲೆ ಮುಖ್ಯ ಗುರುಗಳು ಹಾಗೂ ಮಕ್ಕಳೊಂದಿಗೆ ಆಚರಿಸಿದರು.
ಮಿನಾಸಪೂರ್ ಗ್ರಾಮ ಪಂಚಾಯಿತಿ ಅಧ್ಯಕ್ಷರು ಮತ್ತು ಸದಸ್ಯರು, ಸಿಬ್ಬಂದಿ ಸೇರಿದಂತೆ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸುವಾದರ ಮುಖಾಂತರ ಜಯಂತಿ ಆಚರಣೆ ಮಾಡಲಾಯಿತು.
ಮಹಾಸಾಧ್ವಿ ಹೇಮರೆಡ್ಡಿ ಮಲ್ಲಮ್ಮನವರು ಶ್ರೀಶೈಲ ಮಲ್ಲಿಕಾರ್ಜುನನನ್ನು ತನ್ನ ಆರಾಧ್ಯ ದೈವವಾಗಿ ಆರಾಧಿಸಿ, ಸಾಕ್ಷಾತ್ಕರಿಸಿಕೊಂಡ ಹೇಮರೆಡ್ಡಿ ಮಲ್ಲಮ್ಮ ಮೋಕ್ಷ ಪಡೆಯಲು ಲೌಕಿಕ ಪ್ರಪಂಚವನ್ನು ತ್ಯಾಗ ಮಾಡದೇ ಸಂಸಾರದಲ್ಲಿದ್ದುಕೊಂಡೇ ಸದ್ಗತಿ ಹೊಂದಿದರು. ತಾನು ಎಷ್ಟೇ ಕಷ್ಟ ಅನುಭವಿಸಿದರೂ ಅದಕ್ಕೆ ನೊಂದುಕೊಳ್ಳದೇ, ಮಲ್ಲಿಕಾರ್ಜುನನನ್ನು ಪೂಜಿಸಿ, ಧ್ಯಾನಿಸಿ ಮುಕ್ತಿ ಪಡೆದರು. ಅವರ ಜೀವನ ನಮಗೆ ಆದರ್ಶವಾಗಲಿ.
ವರದಿ: ಜಗದೀಶ್ ಕುಮಾರ್ ಭೂಮಾ
