
ಮಂಡ್ಯ/ ಮಳವಳ್ಳಿ: ಪ್ಲಾಸ್ಟಿಕ್ ಬಳಕೆಯಿಂದ ಪ್ಲಾಸ್ಟಿಕ್ ಎಂಬ ವ್ಯಾಘ್ರದಿಂದ ಪ್ರತಿ ಮನೆಯಲ್ಲೂ ಆರೋಗ್ಯ ಸಮಸ್ಯೆ ಕಾಡುತ್ತಿದೆ ಎಂದು ಸಾರ್ವಜನಿಕ ಆಸ್ಪತ್ರೆ ಆಡಳಿತಾಧಿಕಾರಿ ಡಾ. ಸಂಜಯ್ ತಿಳಿಸಿದರು.
ಪಟ್ಟಣದ ಸಾರಿಗೆ ಬಸ್ ನಿಲ್ದಾಣದಲ್ಲಿ ಸಾರ್ವಜನಿಕ ಆಸ್ಪತ್ರೆ, ವಿದ್ಯಾ ಪ್ಯಾರಾಮೆಡಿಕಲ್ ಕಾಲೇಜು ಹಾಗೂ ಸೌಹಾರ್ದ ನಾಗರಿಕ ವೇದಿಕೆ ವತಿಯಿಂದ ಅಂತರರಾಷ್ಟ್ರೀಯ ಶುಶ್ರೂಷಕರ ದಿನಾಚರಣೆ ಅಂಗವಾಗಿ ಪ್ಲಾಸ್ಟಿಕ್ ಬಳಕೆಯಿಂದ ಆಗುವ ದುಷ್ಟರಿಣಾಮಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಪ್ಲಾಸ್ಟಿಕ್ ಬಳಕೆ ಯಿಂದ ಪರಿಸರಕ್ಕೆ ಮಾರಕವಾಗಲಿದೆ ಎಲ್ಲರೂ ಎಚ್ಚೆತ್ತುಕೊಂಡು ಪ್ಲಾಸ್ಟಿಕ್ ಬಳಕೆಯಿಂದ ದೂರವಿರಿ ಎಂದರು.
ಇದೇ ವೇಳೆ ದಂತ ವೈದ್ಯೆ ಡಾ. ಅನುಪಮಾರವರು ಪ್ಲಾಸ್ಟಿಕ್ ಬಳಕೆಯಿಂದ ಕ್ಯಾನ್ಸರ್ ಹೇಗೆ ಬರುತ್ತದೆ. ಯಾವ ರೀತಿ ಶರೀರಕ್ಕೆ ಸೇರುತ್ತದೆ ಎಂಬುದನ್ನು ಸಂಕ್ಷಿಪ್ತವಾಗಿ ವಿವರಿಸಿದರು.
ಇನ್ನೂ ಸೌಹಾರ್ಧ ನಾಗರೀಕ ವೇದಿಕೆಯ ಅಧ್ಯಕ್ಷ ಮಹೇಶಕುಮಾರ ಮಾತನಾಡಿ, ಪರಿಸರವನ್ನು ಉಳಿಸಬೇಕಾದರೆ ಪ್ರತಿಯೊಬ್ಬರೂ ಗಿಡಗಳನ್ನು ನೆಟ್ಟು ಬೆಳೆಸಿ ಇದರಿಂದ ಬಿಸಲಿನ ತಾಪಮಾನ ಕಡಿಮೆಯಾಗುತ್ತದೆ ಎಂದರು.
ಇದೇ ವೇಳೆ ವಿದ್ಯಾ ಪ್ಯಾರಾಮೆಡಿಕಲ್ ಕಾಲೇಜು ವಿದ್ಯಾರ್ಥಿಗಳು ಪ್ಲಾಸ್ಟಿಕ್ ಬಳಕೆಯಿಂದ ಆಗುವ ದುಷ್ಟರಿಣಾಮಗಳ ಬಗ್ಗೆ ಕಿರುನಾಟಕ ಮೂಲಕ ಸಾರ್ವಜನಿಕರ ಗಮನ ಸೆಳೆದರು.
ಇದೇ ವೇಳೆ ಶುಶ್ರೂಷಕರು ಹಾಗೂ ವಿದ್ಯಾರ್ಥಿಗಳು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪ್ಲಾಸ್ಟಿಕ್ ತ್ಯಜಿಸಿ ಆರೋಗ್ಯ ಕಾಪಾಡಿಕೊಳ್ಳಿ ಎಂದು ಘೋಷಣೆ ಕೂಗುತ್ತಾ ಅರಿವು ಜಾಥಾ ನಡೆಸಿದರು.
ಕಾರ್ಯಕ್ರಮದಲ್ಲಿ ಸಾರ್ವಜನಿಕ ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ಸಂಜಯ್ , ಸೌಹಾರ್ದ ನಾಗರೀಕ ವೇದಿಕೆ ಅಧ್ಯಕ್ಷ ಮಹೇಶ್ ಕುಮಾರ, ಚಿಕ್ಕಣ್ಣ ಡಾ. ಶಿವಸ್ವಾಮಿ, ಡಾ.ಅನುಪಮ , ಚಂದ್ರಮೋಹನ್ ಸೇರಿದಂತೆ ಹಲವರು ಇದ್ದರು.
- ಕರುನಾಡ ಕಂದ
