ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ವಿರುಪಾಪುರ ಗ್ರಾಮ ಪಂಚಾಯಿತಿಯ ಸದಸ್ಯ ಶ್ರೀನಾಥ / ಸತ್ಯನಾರಾಯಣ ಅವರ ಅಕಾಲಿಕ ಮರಣದಿಂದ ತೆರವುಗೊಂಡಿದ್ದ ಸ್ಥಾನಕ್ಕೆ ಉಪಚುನಾವಣೆ ಘೋಷಣೆಯಾಗಿದ್ದು ನಾಮಪತ್ರಗಳ ಸಲ್ಲಿಕೆ ಕಾರ್ಯ ಆರಂಭವಾಗಿದೆ ಎಂದು ತಹಶೀಲ್ದಾರ್ ಶೃತಿ ಕೆ. ತಿಳಿಸಿದ್ದಾರೆ.
ಅವರು ಈ ಕುರಿತು ನೀಡಿದ ಪತ್ರಿಕಾ ಹೇಳಿಕೆಯಲ್ಲಿ ಜಿಲ್ಲಾಧಿಕಾರಿಗಳು ಚುನಾವಣೆಯನ್ನು ಘೋಷಣೆ ಮಾಡಿದ್ದು, ಸಾಮಾನ್ಯ ಮೀಸಲು ವರ್ಗಕ್ಕೆ ಈ ಸ್ಥಾನವನ್ನು ನಿಗದಿಪಡಿಸಲಾಗಿದೆ. ನಾಮಪತ್ರಗಳನ್ನು ಸಲ್ಲಿಸಲು ಮೇ – 14 ಬುಧವಾರ ಕೊನೆಯ ದಿನಾಂಕವಾಗಿದೆ.
ನಾಮಪತ್ರ ಪರಿಶೀಲನೆ ಮೇ-15,
ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಮೇ-17 ಮತದಾನ ಅವಶ್ಯವಿದ್ದಲ್ಲಿ ಮೇ-25ರಂದು
ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆ ವರೆಗೆ ಮತದಾನ ನಡೆಯಲಿದೆ.
ಮಾಹಿತಿಗಾಗಿ: ಹೆಚ್ಚಿನ ಮಾಹಿತಿಗಾಗಿ ಚುನಾವಣಾಧಿಕಾರಿ ವೀರೇಶ ಗೋನವಾರ (9620091050),
ಸಹಾಯಕ ಚುನಾವಣಾಧಿಕಾರಿ ರಾಮದಾಸ ಅವರನ್ನು ಬೆಳಿಗ್ಗೆ 11.00ರಿಂದ ಮಧ್ಯಾಹ್ನ: 3.00ರವರೆಗೆ ವಿರುಪಾಪುರ ಗ್ರಾಮ ಪಂಚಾಯಿತಿ ಕಾರ್ಯಾಲಯದ ಚುನಾವಣಾ ಕೊಠಡಿಯಲ್ಲಿ ಸಂಪರ್ಕಿಸಲು ತಿಳಿಸಿದ್ದಾರೆ.
ನೀತಿ ಸಂಹಿತೆ: ಚುನಾವಣೆ ನಡೆಯುವ ಪ್ರದೇಶದಲ್ಲಿ ಮಾದರಿ ನೀತಿ ಸಂಹಿತೆ ಮೇ- 8 ರಿಂದ 28 ವರೆಗೆ ಜಾರಿ ಇರುತ್ತದೆಂದು ತಿಳಿಸಿದರು.
- ಕರುನಾಡ ಕಂದ
