ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರೈತ ಮತ್ತು ಕಾರ್ಮಿಕ ನೀತಿಗಳ ವಿರುದ್ದ ಕರ್ನಾಟಕ ರಾಜ್ಯ ರೈತ ಸಂಘ ವತಿಯಿಂದ ರಾಜ್ಯಾದ್ಯಕ್ಷರ ಆದೇಶದ ಮೇರೆಗೆ ಪಟ್ಟಣದಲ್ಲಿ ದಿನಾಂಕ 20-5-2025 ರಂದು ಹೋರಾಟ ಹಮ್ಮಿಕೊಳ್ಳಲಾಗಿದೆ.
ಈ ಹೋರಾಟ ನಿಮಿತ್ಯ ಪಟ್ಟಣದ ಪ್ರವಾಸ ಮಂದಿರದಲ್ಲಿ ದಿನಾಂಕ 15-5-2025 ರಂದು 10- 30 ಗಂಟೆಗೆ ಪೂರ್ವಭಾವಿ ಸಭೆ ಇರುತ್ತದೆ ಆದ್ದರಿಂದ
ಈ ಸಭೆಗೆ ಕೊಟ್ಟೂರು ತಾಲೂಕಿನ ರೈತ ಸಂಘಟನೆಗಳು, ಈರುಳ್ಳಿ ಬೆಳೆಗಾರರ ಸಂಘ, ದಲಿತ ಸಂಘರ್ಷ ಸಮಿತಿಗಳು, ಕಟ್ಟಡ ಕಾರ್ಮಿಕರ ಸಂಘ, ಕೃಷಿ ಕೂಲಿ ಕಾರ್ಮಿಕರ ಸಂಘ, ಗ್ರಾಮೀಣ ಭಾಗದ ಕಾರ್ಮಿಕ ಸಂಘಟನೆಗಳು, ಆಟೋ ಚಾಲಕರ ಸಂಘಟನೆಗಳು, ಟ್ಯಾಕ್ಸಿ ಮತ್ತು ಕಾರು ಚಾಲಕರ ಸಂಘಗಳು, ಬೀದಿ ಬದಿ ವ್ಯಾಪಾರಸ್ಥರು, ಹಮಾಲರ ಸಂಘದವರು ಹಾಗೂ ಇನ್ನಿತರ ಸಂಘ-ಸಂಸ್ಥೆಗಳ ಎಲ್ಲಾ ಅಧ್ಯಕ್ಷರು ಉಪಾಧ್ಯಕ್ಷರು ಪದಾಧಿಕಾರಿಗಳು ಸದಸ್ಯರು ಈ ಸಭೆಯಲ್ಲಿ ಭಾಗವಹಿಸಿ ಹೋರಾಟದ ಬಗ್ಗೆ ಚರ್ಚೆ ಮಾಡಿ ದಿನಾಂಕ 20- 5- 2025 ರಂದು ನಡೆಯಲಿರುವ ಈ ಹೋರಾಟದಲ್ಲಿ ಎಲ್ಲಾ ಸಂಘಟನೆಗಳ ಪಧಾದಿಕಾರಿಗಳು ಸದಸ್ಯರುಗಳು ಭಾಗವಹಿಸಿ ಈ ಹೋರಾಟವನ್ನು ಯಶಸ್ವಿಗೊಳಿಸಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಕೊಟ್ಟೂರು ತಾಲೂಕು ಪ್ರಧಾನ ಕಾರ್ಯದರ್ಶಿ ಗುಡಿಯಾರ ಮಲ್ಲಿಕಾರ್ಜುನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- ಕರುನಾಡ ಕಂದ
