ಶಿವಮೊಗ್ಗ: ಆಶ್ರಯ ಸಮಿತಿಯ ಕಚೇರಿಯಲ್ಲಿ ನಡೆದ ಪ್ರಮುಖ ಸಭೆಯಲ್ಲಿ ಭಾಗವಹಿಸಿ, ಆಶ್ರಯ ಯೋಜನೆಯಡಿಯಲ್ಲಿ ನಿರ್ಮಾಣ ಹಂತದಲ್ಲಿರುವ ಮನೆಗಳ ಬಾಕಿ ಉಳಿದಿರುವ ಕಾಮಗಾರಿಗಳ ಕುರಿತು ಸುದೀರ್ಘವಾಗಿ ಚರ್ಚಿಸಲಾಯಿತು.
ಶೀಘ್ರವಾಗಿಯೇ ಈ ಕಾಮಗಾರಿಗಳನ್ನು ಪೂರ್ಣಗೊಳಿಸಿ ಫಲಾನುಭವಿಗಳಿಗೆ ಮನೆ ಹಸ್ತಾಂತರಿಸುವ ಕುರಿತು ತಕ್ಷಣವೇ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಯಿತು.
ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಡಿ.ಎಸ್. ಅರುಣ್, ಮಹಾನಗರ ಪಾಲಿಕೆಯ ಆಯುಕ್ತರಾದ ಶ್ರೀಮತಿ ಕವಿತಾ ಯೋಗಪ್ಪನವರ್ ಹಾಗೂ ಆಶ್ರಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
