ಬೆಂಗಳೂರು : ಕೇಂದ್ರ ಸರ್ಕಾರದಿಂದ ಬರಬೇಕಾದ ಪಿಂಚಣಿ ಎರಡು ವರ್ಷದಿಂದ ರಾಜ್ಯಕ್ಕೆ ಕೊಟ್ಟಿಲ್ಲ. ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಈವರೆಗೆ ಕೇಂದ್ರದಿಂದ ಹಣ ಬರಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದರು.
ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕೇಂದ್ರ ಸರ್ಕಾರದಿಂದ ಬರಬೇಕಾದ ಪಿಂಚಣಿ ಎರಡು ವರ್ಷದಿಂದ ರಾಜ್ಯಕ್ಕೆ ಕೊಟ್ಟಿಲ್ಲ. ರಾಜ್ಯ ಸರ್ಕಾರವೇ ಬಹುತೇಕ ಹಣ ಕೊಡುವ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರದ ಹೆಸರಿದೆ. ಆದರೂ ಚೂರು, ಪಾರು ಶೇ ಕೇಂದ್ರದ ಹಣವೂ ಬರುತ್ತಿಲ್ಲ. ಈ ನಿರಂತರ ಅನ್ಯಾಯ ಪ್ರಶ್ನಿಸಬೇಕಲ್ಲವಾ ನೀವು ಎಂದು ಪ್ರಶ್ನಿಸಿದರು.
15 ನೇ ಹಣಕಾಸು ಆಯೋಗದಲ್ಲಿ 5,495 ಕೋಟಿ ರೂಪಾಯಿ ವಿಶೇಷ ಅನುದಾನ ಕೊಡಬೇಕು, ಕೆರೆ ಮತ್ತು ಫೆರಿಫೆರಲ್ ರಿಂಗ್ ರಸ್ತೆಗೆ ಕೊಡಬೇಕಾದ ಹಣ ಸೇರಿ ಒಟ್ಟು 11,495 ಕೋಟಿ ರೂಪಾಯಿ ಕೇಂದ್ರದಿಂದ ಬರಬೇಕಿತ್ತು. ಏನನ್ನೂ ಕೊಡುತ್ತಿಲ್ಲ. ನಾವು ರಾಜ್ಯದಿಂದ 4.5 ಲಕ್ಷ ಕೋಟಿ ತೆರಿಗೆ ಕೊಟ್ಟರೂ ರಾಜ್ಯಕ್ಕೆ ಸಣ್ಣ ನೆರವೂ ಕೇಂದ್ರದಿಂದ ಬರುವುದಿಲ್ಲ, ಕೇಂದ್ರ ಪುರಸ್ಕೃತ ಯೋಜನೆಗಳಿಗೂ ಹಣ ಕೊಡುವುದಿಲ್ಲ, ಆದರೆ ಅಭಿವೃದ್ಧಿಗೆ ರಾಜ್ಯ ಸರ್ಕಾರದ ಬಳಿ ಹಣ ಇಲ್ಲ ಅಂತ ನೀವೇ ಹೊರಗೆ ಆರೋಪ ಮಾತಾಡ್ತೀರಿ ಎಂದು ಸಿಎಂ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದರು.
ದಿಶಾ ಸಭೆಯಲ್ಲಿ ರಾಜ್ಯ ಸದಸ್ಯ ಎ.ಸಿ.ದಾನಪ್ಪ ಪ್ರಥಮ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿ ಕುಡಿಯುವ ನೀರಿಗೆ ಹಣ ಕೊಡಲಾಗದಷ್ಟು ಕೇಂದ್ರ ದುರ್ಬಲವಾಗಿದೆಯೇ ಎಂದು ರಾಜ್ಯದ ಎಲ್ಲಾ ಸಂಸದರು ಕೇಂದ್ರ ಸರ್ಕಾರದ ಮೇಲೆ ಒತ್ತಡವನ್ನು ತರಬೇಕು ಎಂದು ತಿಳಿಸುತ್ತಾ ಕೇಂದ್ರ ಸರ್ಕಾರದ ಮತ್ತು ಕೇಂದ್ರ ಪುರಸ್ಕೃತ ಯೋಜನೆಗಳ ಬಗ್ಗೆ ಸಭೆಯಲ್ಲಿ ಚರ್ಚಿಸಿದರು.
ಈ ಸಂದರ್ಭದಲ್ಲಿ ಶಾಸಕ ರಿಜ್ವಾನ್ ಅರ್ಷದ್, ಸಂಸದರು, ಶಾಸಕರು, ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಸರ್ಕಾರದ ಎಲ್ಲಾ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು ಉಪಸ್ಥಿತಿಯಲ್ಲಿದ್ದರು.
ವರದಿ : ಜಿಲಾನಸಾಬ್ ಬಡಿಗೇರ್
