ಕೊಳ್ಳೇಗಾಲ :-ಪಟ್ಟಣದಲ್ಲಿ ನಿರ್ಮಾಣವಾಗುತ್ತಿರುವ ಅಂಬೇಡ್ಕರ್ ಭವನದ ಮುಂದುವರಿದ ಕಾಮಗಾರಿಗೆ ಈಗಾಗಲೇ 3 ಕೋಟಿ ಅನುದಾನ ನೀಡಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸಚಿವ ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದರು.
ಪಟ್ಟಣದಲ್ಲಿರುವ ಅಂಬೇಡ್ಕರ್ ಸಮುದಾಯ ಭವನದ ಕಾಮಗಾರಿ ವೀಕ್ಷಣೆ ಮಾಡಿ ಮಾತನಾಡಿದ ಅವರು, ಸಮಾಜ ಕಲ್ಯಾಣ ಇಲಾಖೆ ವತಿಯಿಂದ 3 ಕೋಟಿ ಅನುದಾನ ನೀಡಿದ್ದು ಈಗಾಗಲೇ 90 ಲಕ್ಷ ಬಿಡುಗಡೆ ಮಾಡಲಾಗಿದೆ. ಉಳಿದ 2.10 ಕೋಟಿ ಅನುದಾನವನ್ನು ಸದ್ಯದಲ್ಲಿಯೇ ಬಿಡುಗಡೆ ಮಾಡಲಾಗುವುದು. ಅಲ್ಲದೇ ಭವನವನ್ನು ಮತ್ತಷ್ಟು ಅಭಿವೃದ್ಧಿಪಡಿಸಲು 3 ಕೋಟಿ ಜೊತೆಗೆ ಕೋಟಿ ಹೆಚ್ಚುವರಿ ಅನುದಾನ ನೀಡಲಾಗುವುದು ಎಂದರು.
ಭವನ ನಿರ್ಮಾಣ ಕಾಮಗಾರಿ ಮಾಡಿರುವ ಕೆಆರ್‌ಐಡಿಎಲ್
ಇಲಾಖೆಯ ಅಧಿಕಾರಿಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಭವನ ನಿರ್ಮಾಣದಿಂದ ಜನಾಂಗದ ಬಡವರಿಗೆ ಅನುಕೂಲವಾಗಲಿದೆ. ಆದಷ್ಟು ಬೇಗ ಕಾಮಗಾರಿಯನ್ನು ಪೂರ್ಣಗೊಳಿಸಿ ಭವನ ಉದ್ಘಾಟನೆ ಮಾಡಲಾಗುವುದು ಎಂದು ತಿಳಿಸಿದರು.
ಭವನ ನಿರ್ಮಾಣ ಕಾಮಗಾರಿ ವಿಷಯದಲ್ಲಿ ಆಗುತ್ತಿರುವ ತೊಂದರೆಗಳ ಕುರಿತು ಭೀಮನಗರದ ಮುಖಂಡ ಅವರಿಂದ ಮಾಹಿತಿ ಪಡೆದುಕೊಂಡ ಸಚಿವರು ಯಾವುದೇ ಕಾರಣಕ್ಕೂ ಎದೆಗುಂದದೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ಶಾಸಕ ಎ.ಆರ್.ಕೃಷ್ಣಮೂರ್ತಿ, ನಗರಸಭಾ ಅಧ್ಯಕ್ಷೆ ರೇಖಾ ರಮೇಶ್, ಅಂಬೇಡ್ಕರ್ ಸ್ಮಾರಕ ಸಂಘದ ಅಧ್ಯಕ್ಷ ಆನಂದಮೂರ್ತಿ, ಭೀಮನಗರದ ಯಜಮಾನರಾದ ಚಿಕ್ಕಮಾಳಿಗೆ, ಸಿದ್ದಾರ್ಥ್, ಸಿದ್ದರಾಜು, ನಟರಾಜು, ಕಿರಣ್, ಕೆಆರ್‌ಐಡಿಎಲ್ ಇಇ ಚಿಕ್ಕಲಿಂಗಯ್ಯ ಸೇರಿದಂತೆ ಇತರರಿದ್ದರು.
