ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಪ್ರಯಾಣಿಕರ ಗಮನಕ್ಕೆ, ನಾಳೆ ಬಸ್ ಸಂಚಾರಕ್ಕೆ ವ್ಯತ್ಯಯ ಸಾಧ್ಯತೆ

ಬಳ್ಳಾರಿ / ಕಂಪ್ಲಿ : ರಾಜ್ಯ ಸರ್ಕಾರದ 2ನೇ ವರ್ಷದ ಸಾಧನೆ ಅಂಗವಾಗಿ ಮೇ 20ರಂದು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ನಡೆಯಲಿರುವ ‘ಪ್ರಗತಿಯತ್ತ ಕರ್ನಾಟಕ – ಸಮರ್ಪಣೆ ಸಂಕಲ್ಪ’ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬಳ್ಳಾರಿ ವಿಭಾಗದಿಂದ 225 ಬಸ್ಸುಗಳನ್ನು ಕಾರ್ಯಕ್ರಮಕ್ಕೆ ನಿಯೋಜಿಸಲಾಗಿದೆ. ಜಿಲ್ಲಾಡಳಿತದ ಆದೇಶದಂತೆ ಈ ಬಸ್‌ಗಳನ್ನು ತಾತ್ಕಾಲಿಕ ಒಪ್ಪಂದದ ಆಧಾರದಲ್ಲಿ ಉಪಯೋಗಿಸಲಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಮೇ 20ರಂದು ಬಳ್ಳಾರಿ, ಸಿರುಗುಪ್ಪ, ತೆಕ್ಕಲಕೋಟೆ, ಕುರುಗೋಡು, ಕುಡತಿನಿ, ಕಂಪ್ಲಿ ಹಾಗೂ ಸಂಡೂರು ಪ್ರದೇಶಗಳಿಂದ ಪ್ರತಿ ದಿನ ನಿರ್ವಹಿಸಲಾಗುವ ಕೆಲವೊಂದು ಬಸ್ ಸಂಚಾರದಲ್ಲಿ ವ್ಯತ್ಯಯ ಸಂಭವಿಸುವ ಸಾಧ್ಯತೆ ಇದೆ.

ರಾಜ್ಯದ ಮುಖ್ಯಮಂತ್ರಿ ಭಾಗವಹಿಸಲಿರುವ ಈ ಸಮಾರಂಭದಲ್ಲಿ ವಿವಿಧ ಹಕ್ಕುಪತ್ರಗಳು ಹಾಗೂ ಸವಲತ್ತುಗಳ ವಿತರಣೆ ನಡೆಯಲಿದೆ. ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಂದ ಫಲಾನುಭವಿಗಳನ್ನು ಈ ಕಾರ್ಯಕ್ರಮಕ್ಕೆ ಕರೆ ತರಲಾಗುತ್ತಿದೆ.

ಸಾರ್ವಜನಿಕರು ಈ ತಾತ್ಕಾಲಿಕ ಅಸೌಕರ್ಯಕ್ಕೆ ಸಹಕಾರ ನೀಡಬೇಕು ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ