ಬಳ್ಳಾರಿ / ಕಂಪ್ಲಿ : ಕರ್ನಾಟಕ ಮುಸ್ಲಿಂ ಸಂಘದ ಕಂಪ್ಲಿ ತಾಲೂಕಿನ ಅಧ್ಯಕ್ಷ ಹಾಗೂ ಕಾಂಗ್ರೆಸ್ ಹಿರಿಯ ಮುಖಂಡ ಎನ್. ಯೂನಸ್ (56) ಹೃದಯಘಾತದಿಂದ ಭಾನುವಾರ ಸಂಜೆ ನಿಧನರಾಗಿದ್ದಾರೆ.
ಇವರ ಅಂತ್ಯಸಂಸ್ಕಾರವನ್ನು ಇಂದು ಸೋಮವಾರ 19 -05- 2025 ರಂದು ಮಧ್ಯಾಹ್ನ ನೆರವೇರಲಿದೆ ಎಂದು ಕುಟುಂಬ ವರ್ಗದವರು ತಿಳಿಸಿದ್ದಾರೆ.
ಮೃತರಿಗೆ ಇಬ್ಬರು ಪುತ್ರರು, ಒಬ್ಬ ಪುತ್ರಿ , ಪತ್ನಿ ಇದ್ದು , ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಇವರ ಅಗಲಿಕೆಗೆ ಕಂಪ್ಲಿ ವಿಧಾನಸಭಾ ಕ್ಷೇತ್ರದ ಶಾಸಕ ಜೆ. ಎನ್. ಗಣೇಶ ಸೇರಿದಂತೆ ಅನೇಕ ಸಂಘ ಸಂಸ್ಥೆಗಳು ಮುಸ್ಲಿಂ ಸಮಾಜದ ಮುಖಂಡರು ಸಂತಾಪ ಸೂಚಿಸಿದ್ದಾರೆ.
ವರದಿ : ಜಿಲಾನಸಾಬ್ ಬಡಿಗೇರ್
