ಬೆಂಗಳೂರು : ಖ್ಯಾತ ಲೇಖಕಿ ಬಾನು ಮುಷ್ತಾಕ್ ಅವರ ‘ಹಸೀನಾ ಮತ್ತು ಇತರ ಕತೆಗಳು’ ಕಥಾಸಂಕಲನದ ಇಂಗ್ಲಿಷ್ ಅನುವಾದಿತ ‘ಹಾರ್ಟ್ ಲ್ಯಾಂಪ್’ ಕೃತಿಯು ಪ್ರತಿಷ್ಠಿತ ಇಂಟರ್ ನ್ಯಾಷನಲ್ ಬೂಕರ್ ಪ್ರಶಸ್ತಿಗೆ ಆಯ್ಕೆಯಾಗಿದೆ.
ಮೇ. 21ರಂದು ಲಂಡನ್ನಲ್ಲಿ ನಡೆದ ಸಮಾರಂಭದಲ್ಲಿ ಈ ಕುರಿತ ಅಧಿಕೃತ ಘೋಷಣೆ ಹೊರಬಿದ್ದಿದೆ. ವಿಜೇತರಿಗೆ 50,000 ಪೌಂಡ್ ಬಹುಮಾನ ಸಿಗಲಿದೆ.
ಇದನ್ನು ಲೇಖಕರು ಹಾಗೂ ಅನುವಾದಕರ ನಡುವೆ ಹಂಚಲಾಗುತ್ತದೆ. ಶಾರ್ಟ್ ಲಿಸ್ಟ್ನಲ್ಲಿ ಆಯ್ಕೆಯಾಗಿದ್ದ ಎಲ್ಲರನ್ನೂ ಲಂಡನ್ ನಲ್ಲಿ ನಡೆದ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿತ್ತು.
ಪ್ರಶಸ್ತಿಯ ಅಂತಿಮ ಘಟ್ಟಕ್ಕೆ ಆರು ಕೃತಿಗಳು ತಲುಪಿದ್ದವು. ಅವುಗಳ ಪೈಕಿ ಬಾನು ಮುಷ್ತಾಕ್ ಅವರ ಕೃತಿ ಪ್ರಶಸ್ತಿಗೆ ಆಯ್ಕೆಯಾಗಿರುವುದು ಕನ್ನಡ ಸಾಹಿತ್ಯಕ್ಕೆ ವಿಶ್ವ ವೇದಿಕೆಯಲ್ಲಿ ಮಹತ್ವದ ಸ್ಥಾನ ದೊರೆತಂತಾಗಿದೆ.
ವರದಿ : ಜಿಲಾನಸಾಬ್ ಬಡಿಗೇರ್
