ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಎಂದಿಗೂ ಕನ್ನಡ ಮಾತನಾಡಲ್ಲ ಅಂತ ದರ್ಪ ತೋರಿದ್ದ ಎಸ್. ಬಿ. ಐ. ಬ್ಯಾಂಕ್​ ಮ್ಯಾನೇಜರ್​: ಸಿಎಂ ಖಂಡನೆ ಬೆನ್ನಲ್ಲೇ ಎತ್ತಂಗಡಿ

ಬೆಂಗಳೂರು : ಕರ್ನಾಟಕಕ್ಕೆ ಬಂದು ಇಲ್ಲೇ ಬದುಕು ಕಟ್ಟಿಕೊಂಡರೂ ಈ ನೆಲದ ಕೆಲವು ಪರಭಾಷಿಕರಿಗೆ ಕೊಂಚವೂ ಕೃತಜ್ಞತೆಯೇ ಇಲ್ಲ, ಇತ್ತೀಚಿಗೆ ಕೋರಮಂಗಲದ ಹೋಟೆಲ್​ನಲ್ಲಿ ಕನ್ನಡಿಗರ ಬಗ್ಗೆ ಹಿಂದಿಯಲ್ಲಿ ಅತಿ ಕೆಟ್ಟದಾಗಿ ನಿಂದಿಸಿದ ಪದಗಳನ್ನು ಎಲ್​ಇಡಿ ಸ್ಕ್ರೀನ್ ನಲ್ಲಿ ಹಾಕುವ ಮೂಲಕ ಅವಮಾನಿಸಿದ್ದರು. ಇವರ ವಿರುದ್ಧ ಕ್ರಮಕೈಗೊಳ್ಳಲಾಗಿತ್ತು ಈ ಘಟನೆ ಮಾಸುವ ಮುನ್ನವೇ ಮತ್ತೊಂದು ವಿಚಾರ ಬೆಳಕಿಗೆ ಬಂದಿದೆ. ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಚಂದಾಪುರದ ಎಸ್​ಬಿಐ ಬ್ಯಾಂಕ್​​ನ​ ಮಹಿಳಾ ಮ್ಯಾನೇಜರ್​ ನಾನು ಯಾವತ್ತೂ ಕನ್ನಡ ಮಾತಾಡಲ್ಲ ಅಂತ ದರ್ಪ ತೋರಿದ್ದಾರೆ ಈ ಮೂಲಕ ಕನ್ನಡಿಗರನ್ನು ಕೆಣಕುವ ಕೆಲಸ ಮಾಡಿದ್ದಾರೆ.

ಚಂದಾಪುರದ ಎಸ್​ಬಿಐ ಬ್ಯಾಂಕ್​ಗೆ ಕೆಲಸ ನಿಮಿತ್ತ ಗ್ರಾಹಕರೊಬ್ಬರು ಹೋಗಿದ್ದರು. ಬ್ಯಾಂಕ್​ ಮ್ಯಾನೇಜರ್ ಪ್ರಿಯಾಂಕಾ, ಗ್ರಾಹಕರ ಜೊತೆ ಹಿಂದಿಯಲ್ಲಿ ಮಾತನಾಡಿದ್ದಾರೆ. ಇದಕ್ಕೆ, ಗ್ರಾಹಕ ಕನ್ನಡದಲ್ಲಿ ಮಾತನಾಡಿ ಎಂದಿದ್ದಾರೆ. ಆಗ, ಬ್ಯಾಂಕ್​ ಮ್ಯಾನೇಜರ್ ಪ್ರಿಯಾಂಕಾ​ ಗಾಹಕರಿಗೆ ಹಿಂದಿಯಲ್ಲಿ ಮಾತನಾಡುವಂತೆ ಹೇಳಿದ್ದು, ಇದು ಭಾರತ ಬರೀ ಕರ್ನಾಟಕ ಮಾತ್ರ ಅಲ್ಲ. ನಾನು ಯಾವತ್ತೂ ಕನ್ನಡ ಮಾತಾಡಲ್ಲ ಎಂದು ಹೇಳುವ ಮೂಲಕ ಕನ್ನಡಿಗರನ್ನು ಕೆರಳಿಸುವಂತ ಹೇಳಿಕೆ ನೀಡಿದ್ದಾರೆ.

ಇನ್ನು, ಬ್ಯಾಂಕ್​ ಮ್ಯಾನೇಜರ್​ ದರ್ಪ ತೋರಿರುವ ದೃಶ್ಯವನ್ನು ಗ್ರಾಹಕ ತನ್ನ ಮೊಬೈಲ್​ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಬ್ಯಾಂಕ್​ ಮ್ಯಾನೇಜರ್​ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಇನ್ನು, ಈ ವಿಚಾರ ತಿಳಿಯುತ್ತಿದ್ದಂತೆ ಕನ್ನಡಪರ ಸಂಘಟನೆ ಕಾರ್ಯಕರ್ತರು ಚಂದಾಪುರ SBI ಬ್ಯಾಂಕ್ ಶಾಖೆಗೆ ತೆರಳಿ ಪ್ರತಿಭಟನೆ ನಡೆಸಿದರು. ಬ್ಯಾಂಕ್ ಮ್ಯಾನೇಜರ್ ಪ್ರಿಯಾಂಕಾ​ ಸ್ಥಳಕ್ಕೆ ಬರಬೇಕು. ಕನ್ನಡಿಗರಿಗೆ ಕ್ಷಮೆ ಕೇಳಬೇಕು. ಅಲ್ಲಿಯವರೆಗೆ ಸ್ಥಳದಿಂದ ತೆರಳುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕನ್ನಡಪರ ಸಂಘಟನೆ ಕಾರ್ಯಕರ್ತರು ಬ್ಯಾಂಕ್ ಒಳಗೆ ನುಗ್ಗಿ ದಾಖಲೆ ಪತ್ರಗಳನ್ನು ಹರಿದು ಹಾಕಿ ಅಕ್ರೋಶ ವ್ಯಕ್ತಪಡಿಸಿದರು.

ಕ್ಷಮೆ ಕೇಳಿದ ಬ್ಯಾಂಕ್​ ಮ್ಯಾನೇಜರ್
ಕನ್ನಡಿಗರ ಆಕ್ರೋಶಕ್ಕೆ ಬ್ಯಾಂಕ್​ನ ಮಹಿಳಾ ಮ್ಯಾನೇಜರ್​ರನ್ನು ರಾತ್ರೋರಾತ್ರಿ ವರ್ಗಾವಣೆ ಮಾಡಲಾಗಿದೆ. ಹೊರ ರಾಜ್ಯಕ್ಕೆ ವರ್ಗಾವಣೆಗೊಳಿಸಿ ಮಂಗಳವಾರ ರಾತ್ರಿಯೇ ಆದೇಶ ಹೊರಡಿಸಲಾಗಿದೆ. ಕನ್ನಡಿಗರ ಪ್ರತಿಭಟನೆಯ ಭೀತಿಯಿಂದ ಬ್ಯಾಂಕ್​ ಮ್ಯಾನೇಜರ್​ ಕ್ಷಮೆ ಕೇಳಿದ್ದಾರೆ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ