ಬೆಂಗಳೂರು: ಗೃಹ ಸಚಿವ ಹಾಗೂ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಉಪ ಕುಲಪತಿಯೂ ಆಗಿರುವ ಡಾ. ಜಿ ಪರಮೇಶ್ವರ್ ವಿರುದ್ಧ ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ. ಬುಧವಾರ ತುಮಕೂರು ಹಾಗೂ ಇತರ ಭಾಗಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಲಾಗಿತ್ತು. ಗುರುವಾರವೂ ಇ.ಡಿ ಅಧಿಕಾರಿಗಳು ತಪಾಸಣೆಯನ್ನು ನಡೆಸಿದ್ದಾರೆ. ಮಹತ್ವದ ದಾಖಲೆಗಳನ್ನು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ಹಾಗಾದರೆ ಎರಡು ದಿನಗಳಲ್ಲಿ ಏನೆಲ್ಲಾ ಬೆಳವಣಿಗೆಗಳು ನಡೆದಿವೆ.
ಎಲ್ಲೆಲ್ಲಿ ದಾಳಿ?
- ತುಮಕೂರಿನ ಮರಳೂರು ದಿಣ್ಣೆಯ ಸಿದ್ಧಾರ್ಥ ಎಂಜಿನಿಯರಿಂಗ್ ಕಾಲೇಜು.
- ತುಮಕೂರು ಹೊರವಲಯದ ಸಿದ್ಧಾರ್ಥ ನಗರದಲ್ಲಿರುವ ವೈದ್ಯಕೀಯ ಕಾಲೇಜು.
- ನೆಲಮಂಗಲದ ಟಿ. ಬೇಗೂರಿನಲ್ಲಿರುವ ಸಿದ್ಧಾರ್ಥ ವೈದ್ಯಕೀಯ ಕಾಲೇಜು ಕಚೇರಿ.
- ಕೊಪ್ಪಳ ಜಿಲ್ಲೆಯ ಕುದರಿಮೋತಿ ಸಮೀಪದಲ್ಲಿರುವ ಕೋಳಿ ಸಾಕಾಣಿಕೆ ಮತ್ತು ಮೊಟ್ಟೆ ಉತ್ಪಾದನಾ ಕಂಪನಿ ಕಚೇರಿ.
ಗೃಹ ಸಚಿವ ಡಾ. ಜಿ ಪರಮೇಶ್ವರ್ ಅಧ್ಯಕ್ಷರಾಗಿರುವ ಸಿದ್ಧಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ಇ.ಡಿ ದಾಳಿ
ಎರಡು ದಿನಗಳ ಕಾಲ ಇಡಿ ಅಧಿಕಾರಿಗಳಿ ದಾಳಿಯ ವೇಳೆ ದಾಖಲೆ ಪರಿಶೀಲನೆ ನಡೆಸಿದ್ದಾರೆ.
ರನ್ಯಾ ರಾವ್ ಜೊತೆಗೆ ಹಣಕಾಸು ವ್ಯವಹಾರ ನಡೆಸಲಾಗಿದೆ ಎಂಬ ಆರೋಪ ಈ ದಾಳಿಗೆ ಕಾರಣ ಎನ್ನಲಾಗಿದೆ.
ಇದು ಸಂಪೂರ್ಣ ರಾಜಕೀಯ ಪ್ರೇರಿತ ದಾಳಿ ಎಂದು ಕೈ ನಾಯಕರು ಆರೋಪಿಸಿದ್ದಾರೆ.
ವರದಿ : ಜಿಲಾನಸಾಬ್ ಬಡಿಗೇರ್
