ವಿಜಯಪುರ/ ಇಂಡಿ : ನರೇಂದ್ರ ಮೋದಿ ಅವರು ಪ್ರಧಾನಿಯಾಗಿ 11 ವರ್ಷವಾಯಿತು, ಚುನಾವಣೆಗೂ ಮುಂಚೆ ಅವರು ಕೊಟ್ಟ ಮಾತಿನಂತೆ ನಡೆದುಕೊಂಡಿದ್ದಾರೆಯೇ? ಬಡಜನರಿಗೆ, ಸಾಮಾನ್ಯ ಜನರಿಗೆ ಅಚ್ಛೇ ದಿನಗಳು ಬಂದಿವೆಯೇ’ ಎಂಬುದನ್ನು ಬಿಜೆಪಿ ಮುಖಂಡರು ಮೊದಲು ಆತ್ಮಾವಲೋಕನ ಮಾಡಿಕೊಂಡು ನಂತರ ರಾಜ್ಯ ಸರ್ಕಾರವನ್ನು ಟೀಕಿಸಿ, ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗೂ ಜಾರಿಗೆ ತಂದ ಯೋಜನೆಗಳ ಬಗ್ಗೆ ಮಾತನಾಡುವ ನೈತಿಕ ಹಕ್ಕು ಬಿಜೆಪಿಯವರಿಗಿಲ್ಲ ಕಾಂಗ್ರೆಸ್ ಪಕ್ಷ ಬಡವರು, ದಿನದಲಿತರು, ರೈತರು, ಮಹಿಳೆಯರ ಪರವಾಗಿರುವ ಅಭಿವೃದ್ಧಿ ಪರ ಯೋಜನೆಗಳು ನೀಡುವ ಪಕ್ಷವಾಗಿದೆ.
ಕೇಂದ್ರದ ಬಿಜೆಪಿ ಸರ್ಕಾರವು ಉದ್ಯಮಿಗಳ ಕೋಟ್ಯಾಂತರ ರೂಪಾಯಿ ಸಾಲವನ್ನು ಮನ್ನಾ ಮಾಡಿದೆ. ಬಿಜೆಪಿ ಸರ್ಕಾರ ಶ್ರೀಮಂತರ ಪರವಾಗಿದ್ದರೆ, ನಮ್ಮದು ಕಾಂಗ್ರೆಸ್ ಪಕ್ಷ ಬಡವರ ಪರವಾಗಿರುವ ಸರ್ಕಾರವಾಗಿದೆ.
‘ಮೋದಿ ಪ್ರಧಾನಿ ಆದಮೇಲೆ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಈ ತಪ್ಪನ್ನು ಮುಚ್ಚಿಕೊಳ್ಳಲು ಬಿಜೆಪಿಯವರು ರಾಜ್ಯ ಸರ್ಕಾರದ ವಿರುದ್ಧ ಜನಾಕ್ರೋಶ ಮಾಡುತ್ತಿದ್ದಾರೆ’.
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕಡಿಮೆಯಾದ ಮೇಲೆಯೂ ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್, ಎಲ್‌ಪಿಜಿ ದರ ಇಳಿಸಿಲ್ಲ. ಇದರಿಂದಾಗಿ ಪ್ರತಿಯೊಂದು ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ. ಬೆಲೆ ಏರಿಕೆಗೆ ಮೋದಿ ನೇತೃತ್ವದ ಕೇಂದ್ರ ಸರ್ಕಾರವೇ ಕಾರಣ.
ಅಗತ್ಯ ವಸ್ತುಗಳ ಬೆಲೆ ಗಗನಕ್ಕೆ ಏರುತ್ತಿದೆ, ಮತ್ತೊಂದೆಡೆ ಆದಾಯ ಪಾತಾಳಕ್ಕೆ ಹೋಗುತ್ತಿದೆ. ಇಂತಹ ಸ್ಥಿತಿಯಲ್ಲಿ ಬಡವರಿಗೆ ಆರ್ಥಿಕ ಶಕ್ತಿ ತುಂಬಲು ರಾಜ್ಯದ ಕಾಂಗ್ರೆಸ್ ಸರ್ಕಾರವು, 5 ಗ್ಯಾರಂಟಿ ಯೋಜನೆಗಳನ್ನು ನೀಡಿದೆ.
- ಪ್ರಶಾಂತ ಮು ಕಾಳೆ ಅಧ್ಯಕ್ಷರು
ತಾಲೂಕ ಗ್ಯಾರಂಟಿ ಅನುಷ್ಠಾನ ಸಮಿತಿ.
ವರದಿ. ಅರವಿಂದ್ ಕಾಂಬಳೆ
