ಮೈಸೂರು ನಗರ ಪಾಲಿಕೆ ಆಯುಕ್ತರಾದ ಶೇಖ್ ತನ್ವೀರ್ ಆಸಿಫ್ ಅವರ ಕಾರ್ಯ ಶ್ಲಾಘನೀಯ ಎಂದು ಕನ್ನಡ ಚಳವಳಿ ಹೋರಾಟಗಾರ ತೇಜಸ್ವಿ ನಾಗಲಿಂಗ ಸ್ವಾಮಿ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.
ನೂತನವಾಗಿ ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರಾಗಿ ನೇಮಕವಾದ ಶೇಖ್ ತನ್ವೀರ್ ಆಫಿಸ್ ಅವರು ಪ್ರತಿ ವಾರ್ಡ್ ಗಳಿಗೂ ಭೇಟಿ ನೀಡಿ ಸಮಸ್ಯೆ ಗಳನ್ನು ಆಲಿಸಿ ಅಭಿವೃದ್ಧಿ ಕೆಲಸಗಳಿಗೆ ಒತ್ತು ನೀಡುತ್ತಿರುವುದು ಶ್ಲಾಘನೀಯ ಎಂದು ಹೇಳಿದ್ದಾರೆ.
ಆಯುಕ್ತರು ಪ್ರತಿದಿನ ಬೆಳಿಗ್ಗೆ ತಮ್ಮ ಅಧಿಕಾರಿಗಳೊಂದಿಗೆ ಒಂದೊಂದು ವಾರ್ಡ್ ಗಳಿಗೂ ಭೇಟಿನೀಡಿ ಅಭಿವೃದ್ಧಿ ಕಾಮಗಾರಿ ಪರಿಶೀಲಿಸುತ್ತಿದ್ದಾರೆ ಮತ್ತು ನಗರದ ವಿವಿಧ ಅಂಗಡಿಗಳಲ್ಲಿ ಅನಧಿಕೃತವಾಗಿ ಪ್ಲಾಸ್ಟಿಕ್ ಬಳಕೆ ಮಾಡುತ್ತಿರುವವರಿಗೆ ಸ್ಥಳದಲ್ಲೇ ದಂಡ ವಿಧಿಸಿ ಎಚ್ಚರಿಕೆ ನೀಡುತ್ತಿದ್ದಾರೆ.
ಪೌರ ಕಾರ್ಮಿಕರ ಸ್ಮಶಾನ ಅಭಿವೃದ್ಧಿ ಕಾರ್ಯ, ಅನಧಿಕೃತವಾಗಿ ನಿರ್ಮಾಣ ಮಾಡಿರುವ ಶೇಡ್ ಗಳ ತೆರವು ಕಾರ್ಯಾಚರಣೆ, ಕ್ಲಾಕ್ ಟವರ್ ದುರಸ್ತಿ ಕಾರ್ಯ ಹೀಗೆ ಹತ್ತು ಹಲವು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ನೀಡುವ ಮೂಲಕ ನಗರ ಪಾಲಿಕೆ ಆಯುಕ್ತರಾಗಿ ಅಧಿಕಾರಿಗಳಿಗೆ ಮಾದರಿಯಾಗಿದ್ದಾರೆ ಎಂದು ಕನ್ನಡ ಚಳುವಳಿಗಾರ ತೇಜಸ್ವಿ ನಾಗಲಿಂಗ ಸ್ವಾಮಿ ತಿಳಿಸಿದ್ದಾರೆ.
ಶೇಖ್ ತನ್ವೀರ್ ಆಫಿಸ್ ಅವರು ನಗರಪಾಲಿಕೆ ಸದಸ್ಯರ ಕೊರತೆ ನೀಗಿಸಿ ಮೈಸೂರು ಮಹಾನಗರ ವನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಲಿ ಎಂದು ತೇಜಸ್ವಿ ನಾಗಲಿಂಗ ಸ್ವಾಮಿ ಹಾರೈಸಿದ್ದಾರೆ.
- ಕರುನಾಡ ಕಂದ
