ಬೆಂಗಳೂರು : ಎಂಜಿನಿಯರಿಂಗ್ ಸೇರಿ ವಿವಿಧ ವೃತ್ತಿ ಶಿಕ್ಷಣ ಕೋರ್ಸ್‌ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ್ದ 2025ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆಯ(ಯುಜಿಸಿಇಟಿ) ಫಲಿತಾಂಶವನ್ನು ಶನಿವಾರ ಬೆಳಗ್ಗೆ 11.30ಕ್ಕೆ ಪ್ರಕಟಿಸಲಿದೆ. ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಅವರು ಮಲ್ಲೇಶ್ವರದಲ್ಲಿರುವ ಪ್ರಾಧಿಕಾರದ ಕೇಂದ್ರ ಕಚೇರಿಯಲ್ಲಿ ಆಯೋಜಿಸಿರುವ ಸುದ್ದಿಗೋಷ್ಠಿಯಲ್ಲಿ ಅಧಿಕೃತವಾಗಿ ಫಲಿತಾಂಶ ಪ್ರಕಟಿಸಲಿದ್ದಾರೆ.
ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿ ಶಿಕ್ಷಣ ಕೋರ್ಸ್‌ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶ ಇಂದು (ಮೇ 24) ಪ್ರಕಟವಾಗಲಿದೆ.
ಈ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದು, ಬೆಳಿಗ್ಗೆ 11:30ಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಚೇರಿಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಸುಧಾಕರ್ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಲಿದ್ದಾರೆ. ಬಳಿಕ ಮಧ್ಯಾಹ್ನ 2 ಗಂಟೆ ನಂತರ ಇಲಾಖೆಯ ವೆಬ್ ಸೈಟ್‌ನಲ್ಲಿ ಫಲಿತಾಂಶ ಲಭ್ಯವಾಗಲಿದೆ ಎಂದು ಕೆಇಎ ತಿಳಿಸಿದೆ.
ಕರ್ನಾಟಕ ಪದವಿಪೂರ್ವ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು KEAಯ ಅಧಿಕೃತ ವೆಬ್‌ಸೈಟ್ kea.kar.nic.in ಅಥವಾ cetonline.karnataka.gov.in ನಲ್ಲಿ ತಮ್ಮ ಫಲಿತಾಂಶವನ್ನು ಮಧ್ಯಾಹ್ನ 2 ಗಂಟೆಯ ನಂತರ ಪರಿಶೀಲಿಸಬಹುದು.
ಏ.16ರಂದು ಭೌತ ವಿಜ್ಞಾನ ಮತ್ತು ರಸಾಯನ ವಿಜ್ಞಾನ, ಏ.17ರಂದು ಗಣಿತ ಮತ್ತು ಜೀವ ವಿಜ್ಞಾನ ವಿಷಯಗಳ ಪರೀಕ್ಷೆಗಳನ್ನು 775 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗಿತ್ತು.
ವರದಿ : ಜಿಲಾನಸಾಬ್ ಬಡಿಗೇರ್