ಬೆಂಗಳೂರು : ಕರ್ನಾಟಕದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಉಸಿರಾಟ ಮತ್ತು ಹೃದಯ ಸಂಬಂಧಿ ಸಮಸ್ಯೆ ಇರುವವರಿಗೆ ಕಡ್ಡಾಯ ಕೋವಿಡ್ ಪರೀಕ್ಷೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಒಂದು ತಿಂಗಳಿಗೆ ಸಾಕಾಗುವಷ್ಟು ಪರೀಕ್ಷಾ ಕಿಟ್‌ಗಳನ್ನು ಸಂಗ್ರಹಿಸಲು ಆಸ್ಪತ್ರೆಗಳಿಗೆ ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿ 35 ಸಕ್ರಿಯ ಪ್ರಕರಣಗಳಿದ್ದು, ಅದರಲ್ಲಿ 32 ಬೆಂಗಳೂರಿನಲ್ಲಿವೆ.
ಉಸಿರಾಟ ಹಾಗೂ ಹೃದಯಸಂಬಂಧಿ ಕಾಯಿಲೆಯಿಂದ ದಾಖಲಾಗಿರುವ ರೋಗಿಗಳಿಂದ ಆಸ್ಪತ್ರೆ ಸಿಬ್ಬಂದಿ ಸ್ಯಾಂಪಲ್ಸ್ ಕಲೆಕ್ಟ್ ಮಾಡಿ ಕಡ್ಡಾಯವಾಗಿ ಕೋವಿಡ್ ಟೆಸ್ಟ್ ಮಾಡಬೇಕು. ಜನಸಂದಣಿಯಲ್ಲಿ ಮಾಸ್ಕ್ ಧರಿಸಿ. ಯಾರೂ ಕೂಡಾ ಭಯ ಪಡುವ ಅಗತ್ಯವಿಲ್ಲ. ಕೋವಿಡ್ ಬಂದಿದೆ ಎಂದು ಆತಂಕ ಪಡುವ ಅಗತ್ಯವಿಲ್ಲ. ಆರೋಗ್ಯ ಇಲಾಖೆಯ ಮಾರ್ಗಸೂಚಿಯನ್ನು ಪಾಲಿಸಿ, ಮುಂಜಾಗ್ರತೆ ವಹಿಸಿದರೆ ಸಾಕು ಎಂದು ಸಲಹೆ ನೀಡಿದ್ದಾರೆ.
ವರದಿ : ಜಿಲಾನಸಾಬ್ ಬಡಿಗೇರ್
