ಬಳ್ಳಾರಿ / ಕಂಪ್ಲಿ : ಕಂಪ್ಲಿ ತಾಲೂಕಿನ ಎಲ್ಲಮ್ಮ ಕ್ಯಾಂಪ ಬಳಿ ಕೆಎಸ್ಆರ್ ಟಿ ಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ನಡೆದಿದೆ ಈ ಅಪಘಾತದಲ್ಲಿ ದ್ವಿಚಕ್ರ ವಾಹನದಲ್ಲಿ ಇದ್ದ ಇಬ್ಬರು ಯುವಕರಲ್ಲಿ ಒಬ್ಬ ಯುವಕನು ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೊಬ್ಬ ಯುವಕ ಗಂಭೀರವಾಗಿ ಗಾಯಗೊಂಡಿದ್ದು ಆತನನ್ನು ಬಳ್ಳಾರಿ ಜಿಲ್ಲಾ ಭೀಮ್ಸ್ ಆಸ್ಪತ್ರೆಗೆ ಸಾಗಿಸಲಾಗಿದೆ. ಪ್ರಕರಣ ಕಂಪ್ಲಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಯುವಕರು ಕಂಪ್ಲಿ ಪಟ್ಟಣದ ಎಂ. ಡಿ. ಕ್ಯಾಂಪಿನವರು ಎಂದು ಮೂಲಗಳು ತಿಳಿಸಿವೆ.
ವರದಿ : ಜಿಲಾನಸಾಬ್ ಬಡಿಗೇರ್
