ಕೊಪ್ಪಳ ಜಿಲ್ಲೆಯ ಕುಕನೂರು ಪಟ್ಟಣದ ರೈತ ಸಂಪರ್ಕ ಕೇಂದ್ರದಲ್ಲಿ ಜಿಲ್ಲಾ ಪಂಚಾಯತ್ ಕೊಪ್ಪಳ, ಕೃಷಿ ಇಲಾಖೆ, ಕೊಪ್ಪಳ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಯಲಬುರ್ಗಾ ವತಿಯಿಂದ 2025- 26ನೇ ಸಾಲಿನ ಮುಂಗಾರು ಹಂಗಾಮಿನ ಬಿತ್ತನೆ ಬೀಜ ವಿತರಣಾ ಕಾರ್ಯಕ್ರಮವನ್ನು 26-5-2025 ದಂದು ಬಿತ್ತನೆ ಬೀಜ ವಿತರಣಾ ಕಾರ್ಯಕ್ರಮ ನೆರವೇರಿಸಲಾಗುತ್ತದೆ.
ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಮತ್ತು ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಸವರಾಜ ರಾಯರಡ್ಡಿ ಬಿತ್ತನೆ ಬೀಜ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡುವರು ಎಂದು ರೈತ ಸಂಪರ್ಕ ಕೇಂದ್ರದ ಅಧಿಕಾರಿ ಬಸವರಾಜ ತೇರಿನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- ಕರುನಾಡ ಕಂದ
