
ಗದಗ :ಇತ್ತೀಚಿಗೆ ಕಲಬುರ್ಗಿಯ ಪ್ರವಾಸಿ ಮಂದಿರದಲ್ಲಿ ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ ಖರ್ಗೆ ಬೆಂಬಲಿಗರು ಧಮ್ಕಿ ಹಾಕಿದ್ದಕ್ಕೆ ಬಿಜೆಪಿ ಎಸ್ ಸಿ ಮೋರ್ಚಾ ಗದಗ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮಲ್ಲು ಮಾದರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವಾಚ್ಯ ಶಬ್ದಗಳಿಂದ ನಿಂದಿಸಿ ಕಾರಿನ ಮೇಲೆ ಮೊಟ್ಟೆ ಎಸೆದು, ಮಸಿ ಚೆಲ್ಲಿ ವಿಕೃತಿ ಮೆರೆದಿದ್ದು ಇದು ಪ್ರಜಾತಂತ್ರ ವ್ಯವಸ್ಥೆ ಮೇಲೆ ಮಾಡಿದ ಅಪಚಾರ, ಸರ್ಕಾರ ನಮ್ಮದೇ ಇದೆ ಎಂದು ಈ ರೀತಿ ಗೂಂಡಾವರ್ತನೆ ತೋರಿದ್ದು ಸರಿಯಲ್ಲ ಅಧಿಕಾರ ಶಾಶ್ವತ ಅಲ್ಲ ಎನ್ನುವುದು ಅರಿತುಕೊಳ್ಳಲಿ ಎಂದು ಕಿಡಿ ಕಾರಿದ್ದಾರೆ.
- ಕರುನಾಡ ಕಂದ
