ಮೈಸೂರು: ಮೈಸೂರು ಸ್ಯಾಂಡಲ್ ಸೋಪ್ ರಾಯಭಾರಿಯಾಗಿ ನಟ ಶಿವರಾಜ್ ಕುಮಾರ್ ಅವರನ್ನು ನೇಮಕ ಮಾಡಿ ಎಂದು ಕನ್ನಡ ಚಳವಳಿಗಾರ ತೇಜಸ್ವಿ ನಾಗಲಿಂಗ ಸ್ವಾಮಿ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಕರ್ನಾಟಕಕ್ಕೆ ಮತ್ತು ಕನ್ನಡಕ್ಕೆ ನಟ ಶಿವರಾಜ್ ಕುಮಾರ್ ಅವರು ಮತ್ತು ಅವರ ಕುಟುಂಬದವರು ಅಪಾರವಾದ ಕೊಡುಗೆಯನ್ನು ನೀಡಿದ್ದಾರೆ.
ಈ ಹಿಂದೆ ವರನಟ ಡಾ .ರಾಜಕುಮಾರ್ ಮತ್ತು ನಟ ಡಾ. ಪುನೀತ್ ರಾಜ್ ಕುಮಾರ್ ಅವರು ಯಾವುದೇ ಸಂಭಾವನೆ ಪಡೆಯದೆ ನಂದಿನಿ ಹಾಲಿನ ರಾಯಭಾರಿ ಯಾಗಿ ಜಾಹೀರಾತುಗಳನ್ನು ನೀಡಿದ್ದರು ಎಂದು ತೇಜಸ್ವಿ ಸ್ಮರಿಸಿದ್ದಾರೆ.
ನಟ ಶಿವರಾಜ್ ಕುಮಾರ್ ಅವರಿಗೆ ಕರ್ನಾಟಕ ಮಾತ್ರವಲ್ಲದೆ ಇಡೀ ದೇಶದಾದ್ಯಂತ ಅಭಿಮಾನಿಗಳು ಇರುವುದರಿಂದ ಮೈಸೂರು ಸ್ಯಾಂಡಲ್ ಸೋಪ್ ನ ಪ್ರಚಾರ ದೇಶದ ಮೂಲೆ ಮೂಲೆಗಳಲ್ಲಿ ಪಸರಿಸುತ್ತದೆ ಎಂದು ತೇಜಸ್ವಿ ನಾಗಲಿಂಗ ಸ್ವಾಮಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನಟ ಶಿವರಾಜ್ ಕುಮಾರ್ ನೇಮಕ ಮಾಡುವುದರಿಂದ ಯಾವುದೇ ವಿವಾದ ಉಂಟಾಗುವುದಿಲ್ಲ ಮತ್ತು ಯಾರು ಸಹ ಅಪಸ್ವರ ಎತ್ತುವುದಿಲ್ಲ. ಆದ ಕಾರಣ ಮೈಸೂರು ಸ್ಯಾಂಡಲ್ ಸೋಪ್ ರಾಯಭಾರಿಯಾಗಿ ನಟ ಶಿವರಾಜ್ ಕುಮಾರ್ ಅವರನ್ನು ನೇಮಕ ಮಾಡಬೇಕೆಂದು ತೇಜಸ್ವಿ ನಾಗಲಿಂಗ ಸ್ವಾಮಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.
- ಕರುನಾಡ ಕಂದ
