ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಉದ್ಯಾನವನಗಳಿಗೆ ಪ್ರವೇಶ ನಿರಾಕರಿಸುವಂತಿಲ್ಲ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿನ ಉದ್ಯಾನಗಳಿಗೆ ಬೆಳಿಗ್ಗೆ 5 ರಿಂದ ರಾತ್ರಿ 10 ರ ಅವಧಿಯಲ್ಲಿ ಸಾರ್ವಜನಿಕರಿಗೆ ಪ್ರವೇಶವನ್ನು ನಿರಾಕರಿಸಿದರೆ ಸಹಾಯವಾಣಿ ಸಂಖ್ಯೆ 1533ಕ್ಕೆ ಕರೆ ಮಾಡಿ ದೂರು ನೀಡಬೇಕು ಎಂದು ಅರಣ್ಯ, ಪರಿಸರ ಮತ್ತು ಹವಾಮಾನ ವೈಪರಿತ್ಯ ನಿರ್ವಹಣೆ ವಿಭಾಗದ ವಿಶೇಷ ಆಯುಕ್ತೆ ಪ್ರೀತಿ ಗೆಹ್ಲೋಟ್ ತಿಳಿಸಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ 1,287 ಉದ್ಯಾನಗಳಿದ್ದು, ಸಾರ್ವಜನಿಕರಿಗೆ ಹೆಚ್ಚು ಅನುಕೂಲವಾಗಬೇಕೆಂಬ ಉದ್ದೇಶದಿಂದ 2024ರ ಜೂನ್‌ 12ರಿಂದ ಸಮಯ‌ ನಿಗದಿಮಾಡಲಾಗಿದೆ. ಈ ಸಮಯದಲ್ಲಿ ಯಾವುದೇ ಉದ್ಯಾನಗಳಲ್ಲಾಗಲಿ ಸಾರ್ವಜನಿಕರ ಪ್ರವೇಶವನ್ನು ನಿರಾಕರಿಸುವಂತಿಲ್ಲ. ಉದ್ಯಾನಗಳನ್ನು ಮುಚ್ಚಿದ್ದರೆ ಅಥವಾ ಪ್ರವೇಶ ನಿರಾಕರಿಸಿದರೆ ಅಂತಹ ಉದ್ಯಾನದ‌ ಛಾಯಾಚಿತ್ರದೊಂದಿಗೆ ವಾಟ್ಸಾಪ್‌ ಸಂಖ್ಯೆ 94806 85700, ಸಹಾಯ 2.0 ತಂತ್ರಾಂಶ ಹಾಗೂ ಇಮೇಲ್‌– scfeccm2024@gmail.com ಮೂಲಕ ದೂರು ನೀಡಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ವರದಿ: ಕೊಡಕ್ಕಲ್ ಶಿವಪ್ರಸಾದ್, ಬೆಂಗಳೂರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ