ಚೆನ್ನೈ : ಕಾಲಿವುಡ್ ನಟ ಕಮಲ್ ಹಾಸನ್ ನಟನೆಯ ‘ಥಗ್ ಲೈಫ್’ ಸಿನಿಮಾ ಜೂನ್ 5ರಂದು ರಿಲೀಸ್‌ಗೆ ಸಿದ್ಧವಾಗಿದೆ. ಇತ್ತೀಚೆಗೆ ಚೆನ್ನೈನಲ್ಲಿ ಚಿತ್ರದ ಆಡಿಯೋ ಲಾಂಚ್ ಕಾರ್ಯಕ್ರಮ ನಡೆದಿದ್ದು ಈ ವೇಳೆ, ತಮಿಳಿನಿಂದ ಕನ್ನಡ ಹುಟ್ಟಿದ್ದು ಎಂದ ಕಮಲ್ ಹಾಸನ್ ಹೇಳಿಕೆ ನೀಡಿ ವಿವಾದದ ಕಿಡಿ ಹೊತ್ತಿಸಿದ್ದಾರೆ. ಅದು ಸ್ಯಾಂಡಲ್ ವುಡ್ ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ್ ಎದುರೇ ಕನ್ನಡ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದು, ಇದೀಗ ಕಮಲ್ ಹಾಸನ್ ಹೇಳಿಕೆಗೆ ಕನ್ನಡಿಗರು ಫುಲ್ ರಾಂಗ್ ಆಗಿದ್ದಾರೆ.
ಈ ಸಂಬಂಧ ಸೋಶಿಯಲ್ ಮೀಡಿಯಾದಲ್ಲಿ ಇದೇ ವಿಚಾರ ಬಹಳ ಚರ್ಚೆ ಆಗುತ್ತಿದ್ದು, ಕಮಲ್ ಹಾಸನ್ ಹೇಳಿದ್ದು ಸರಿ ಎಂದು ತಮಿಳಿನ ಕೆಲವರು ವಾದಿಸುತ್ತಿದ್ದಾರೆ. ಇದಕ್ಕೆ ಪ್ರತಿಯಾಗಿ ಕನ್ನಡಿಗರು ಕನ್ನಡದ ಭಾಷೆಯ ಇತಿಹಾಸದ ಬಗ್ಗೆ ಪಾಠ ಮಾಡುತ್ತಿದ್ದಾರೆ. ದ್ರಾವಿಡ ಭಾಷೆಗಳಲ್ಲಿ ಒಂದಾಗಿರುವ ಕನ್ನಡ ಅತ್ಯಂತ ಪ್ರಾಚೀನ ಭಾಷೆ. ಸಂಶೋಧನೆಗಳ ಪ್ರಕಾರ ಕನ್ನಡ ಭಾಷೆ ಕ್ರಿ.ಪೂ. 3ನೇ ಶತಮಾನಕ್ಕಿಂತಲೂ ಹಳೆಯದು ಎನ್ನಲಾಗುತ್ತಿದೆ. ಇದೇ ಕಾರಣಕ್ಕೆ ಕಮಲ್ ಹಾಸನ್ ಹೇಳಿಕೆಯನ್ನು ಕೆಲವರು ಒಪ್ಪಲು ಸಿದ್ಧರಿಲ್ಲ. ಇತಿಹಾಸ ಸರಿಯಾಗಿ ತಿಳಿದುಕೊಂಡು ಮಾತನಾಡಬೇಕು ಎಂದು ಕಾಮೆಂಟ್ ಮಾಡುತ್ತಿದ್ದಾರೆ.
ವರದಿ : ಜಿಲಾನಸಾಬ್ ಬಡಿಗೇರ್
