ಯಲಬುರ್ಗಾ ಕ್ಷೇತ್ರದಲ್ಲಿ ಈವರೆಗೆ 420 ಕೋಟಿಗೂ ಹೆಚ್ಚು ಹಣ ಗ್ಯಾರಂಟಿ ಯೋಜನೆಗಳ ಮೂಲಕ ನೇರವಾಗಿ ಜನರಿಗೆ ತಲುಪಿದೆ.
ಕೊಪ್ಪಳ/ ಕುಕನೂರ: ಕರ್ನಾಟಕ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿ ಅದರಂತೆ ಎಲ್ಲಾ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೆ ತರಲಾಗಿದೆ.
ಶಕ್ತಿ ಯೋಜನೆ, ಅನ್ನಭಾಗ್ಯ, ಗೃಹಲಕ್ಷ್ಮೀ, ಯುವನಿಧಿ, ಗೃಹ ಜ್ಯೋತಿ ಯೋಜನೆಗಳ ಮೂಲಕ ರಾಜ್ಯದ ಬಡ ಜನರಿಗೆ ಕರ್ನಾಟಕ ಸರ್ಕಾರದ ಮೂಲಕ ಚೈತನ್ಯ ತುಂಬುವ ಕೆಲಸ ಆಗಿದೆ, ಒಟ್ಟು ಗ್ಯಾರಂಟಿ ಯೋಜನೆಗಳ ಮೂಲಕ ವರ್ಷಕ್ಕೆ 420 ಕೋಟಿ ಯಲಬುರ್ಗಾ ಕ್ಷೇತ್ರ ಒಂದಕ್ಕೆ ಅನುದಾನ ಸಿಕ್ಕಿದೆ ಎಂದರು.
ಈ ಸ೦ದರ್ಭದಲ್ಲಿ ತಹಶೀಲ್ದಾರ್ ಪ್ರಾಣೇಶ, ಇ. ಒ ಸಂತೋಷ ಪಾಟೀಲ ಬಿರಾದರ್, ಜಿಲ್ಲಾ ಗ್ಯಾರಂಟಿ ಸಮಿತಿ ಉಪಾಧ್ಯಕ್ಷ ಕಾಸಿಂಸಾಬ್ ಯಲಬುರ್ಗಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಸುನೀಲ್ ಕೋರ್ಲಳ್ಳಿ, ಕುಕನೂರ ಗ್ಯಾರಂಟಿ ಸಮಿತಿ ಅಧ್ಯಕ್ಷ ಸಂಗಮೇಶ್ ಗುತ್ತಿ, ಮಲ್ಲು ಜಕ್ಕಲಿ, ಸಮಿತಿ ಉಪಾಧ್ಯಕ್ಷರು ಸದಸ್ಯರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
- ಕರುನಾಡ ಕಂದ
