ಬೆಂಗಳೂರು: ನಗರದ ತ್ರಿಪುರವಾಸಿನಿ ಅರಮನೆ ಆವರಣದಲ್ಲಿ ಇಂಡಿಯಾ ಎಂ ಎಸ್ ಎಂ ಇ ಸಮಾವೇಶವನ್ನು ಕರ್ನಾಟಕ ರಾಜ್ಯ ಉಪಮುಖ್ಯಮಂತ್ರಿ ಶ್ರೀ ಡಿ.ಕೆ. ಶಿವಕುಮಾರ ಅವರು ದೀಪ ಬೆಳಗಿ ಉದ್ಘಾಟಿಸಿದರು.
ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಮಂಡಲ ಹಾಗೂ ವಿವಿಧ ಬ್ಯಾಂಕುಗಳ
ಸಹಯೋಗದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವೆ ಶ್ರೀಮತಿ ಶೋಭಾ ಕರಂದ್ಲಾಜೆ, ಕರ್ನಾಟಕ ರಾಜ್ಯ ಕೈಗಾರಿಕಾ ಸಚಿವ ಶ್ರೀ ಪಾಟೀಲ್ ಮುಂತಾದವರು ಉಪಸ್ಥಿತರಿದ್ದರು.
ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಮಂಡಲ ಅಧ್ಯಕ್ಷ ಶ್ರೀ ಬಾಲಕೃಷ್ಣ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಈ ಕಾರ್ಯಕ್ರಮದಲ್ಲಿ ವಿವಿಧ ಕಂಪೆನಿಗಳ , ಕೈಗಾರಿಕೆಗಳ ವಸ್ತು ಪ್ರದರ್ಶನ ಮತ್ತು ಪ್ರಾತ್ಯಕ್ಷಿಕೆ ವ್ಯವಸ್ಥಿತವಾಗಿ ಜರುಗಿತು.
