ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವಿಶ್ವ ತಂಬಾಕು ರಹಿತ ದಿನಾಚರಣೆ – ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಜಾಗೃತಿ ಕಾರ್ಯಕ್ರಮ

ಬಳ್ಳಾರಿ / ಕಂಪ್ಲಿ : ಮೇ 31 ರಂದು “ವಿಶ್ವ ತಂಬಾಕು ರಹಿತ ದಿನಾಚರಣೆ” ಅಂಗವಾಗಿ ಕಂಪ್ಲಿಯ ತಾಲೂಕು ಆರೋಗ್ಯಾಧಿಕಾರಿಗಳ ಕಾರ್ಯಾಲಯ ಮತ್ತು ಸಮುದಾಯ ಆರೋಗ್ಯ ಕೇಂದ್ರ ಕಂಪ್ಲಿಯ ಸಹಯೋಗದಲ್ಲಿ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

“ಆಕರ್ಷಕ ಉತ್ಪನ್ನಗಳು – ಕರಾಳ ಉದ್ದೇಶಗಳು” ಎಂಬ ಘೋಷವಾಕ್ಯದೊಂದಿಗೆ ನಡೆದ ಈ ಕಾರ್ಯಕ್ರಮದಲ್ಲಿ ಡಾ. ಶ್ರೀನಿವಾಸ್ (ದಂತ ವೈದ್ಯಾಧಿಕಾರಿ) ಅವರು ತಂಬಾಕು ಉತ್ಪನ್ನಗಳ ಸೇವನೆ ಹಾಗೂ ಧೂಮಪಾನದಿಂದ ಉಂಟಾಗುವ ಗಂಭೀರ ಆರೋಗ್ಯ ಸಮಸ್ಯೆಗಳ ಬಗ್ಗೆ ಸಮುದಾಯದಲ್ಲಿ ಜಾಗೃತಿ ಮೂಡಿಸಿದರು.

ಕಾರ್ಯಕ್ರಮದಲ್ಲಿ ಡಾ. ಹಾರಿಕಾ ಮೇಡಂ, ಡಾ. ವಿಶ್ವನಾಥ್ ಸರ್, ತಾಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳು, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳು, ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿಗಳು, ಎನ್‌ಸಿಡಿ ಸಿಬ್ಬಂದಿವರ್ಗದವರು, ವಿವಿಧ ಇಲಾಖೆಗಳ ಅಧಿಕಾರಿಗಳು, ಆರೋಗ್ಯ ಕೇಂದ್ರದ ಸಿಬ್ಬಂದಿ ಮತ್ತು ಹಲವಾರು ಸಾರ್ವಜನಿಕರು ಭಾಗವಹಿಸಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ