ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವಿಶ್ವ ಪರಿಸರ ದಿನಾಚರಣೆ ಕೇವಲ ಆಚರಣೆಗೆ ಮಾತ್ರ ಸೀಮಿತವಾಗಬಾರದು

ಬೆಂಗಳೂರು: ವಿಶ್ವ ಪರಿಸರ ದಿನಾಚರಣೆ ಕೇವಲ ಆಚರಣೆಗೆ ಮಾತ್ರ ಸೀಮಿತವಾಗದೆ, ನಮ್ಮ ಜೀವನದುದ್ದಕ್ಕೂ ಮೈಗೂಡಿಸಿಕೊಳ್ಳಬೇಕು ಎಂದು ಬ್ಯಾಂಕರ್ಸ್ ಕನ್ನಡಿಗರ ಬಳಗದ ಅಧ್ಯಕ್ಷ ಎಂ ವೆಂಕಟೇಶ ಶೇಷಾದ್ರಿಯವರು ತಿಳಿಸಿದರು. ಶ್ರೀಯುತರ ಬಿಡದಿಯ ಜೋಗರದೊಡ್ಡಿಯಲ್ಲಿರುವ ಕೆನರಾ ಬ್ಯಾಂಕ್ ಕೆ ಪಿ ಜೆ ಪ್ರಭು ಕರಕುಶಲ ತರಬೇತಿ ಸಂಸ್ಥೆಯವರು ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆಯಲ್ಲಿ ಮಾತನಾಡುತ್ತಾ
ಸಮಾರಂಭಗಳಲ್ಲಿ ಉಡುಗೊರೆಗೆ ಬದಲಾಗಿ ಗಿಡಗಳನ್ನು ನೀಡುವುದರಿಂದ ಪರಿಸರವನ್ನು ರಕ್ಷಿಸಬಹುದು. ಮರಗಿಡಗಳನ್ನು ಪೋಷಿಸಿದರೆ, ನಮ್ಮ ವೈಯುಕ್ತಿಕ ರಕ್ಷಣೆಯ ಜೊತೆಗೆ ಪರಿಸರ ಸಂರಕ್ಷಣೆಯೂ ಆಗುತ್ತದೆ ಎಂದರು.
ಕೆನರಾ ಬ್ಯಾಂಕ್ ಕೆಪಿಜೆ ಪ್ರಭು ತರಬೇತಿ ಸಂಸ್ಥೆಯ ನಿರ್ದೇಶಕರಾದ ಶ್ರೀ ಟಿ ಶಿವರಾಂ ರವರು ಮಾತನಾಡಿ, ಪರಿಸರದ ಬಗ್ಗೆ ಅರಿವಿನ ಜೊತೆಗೆ ಪ್ರಜ್ಞೆಯೂ ಬೇಕು ಪ್ಲಾಸ್ಟಿಕ್ ಬಳಕೆ ಇತಿ-ಮಿತಿಯಲ್ಲಿರಬೇಕು, ಮುಂದಿನ ಪೀಳಿಗೆಗೆ ಪರಿಸರ ಸಂರಕ್ಷಣೆ ಮಾಡುವುದು ಎಲ್ಲರ ಕರ್ತವ್ಯವಾಗಿದೆ.
ಇದೇ ವೇಳೆ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಕೆನರಾ ಬ್ಯಾಂಕ್ ಕೆಪಿಜೆ ಪ್ರಭು ತರಬೇತಿ ಸಂಸ್ಥೆ ಮತ್ತು ಬ್ಯಾಂಕರ್ಸ್ ಕನ್ನಡಿಗರ ಬಳಗವು ಜಂಟಿಯಾಗಿ ಆಯೋಜಿಸಿದ್ದ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದ ನೂತನ್ ಗೌಡ, ಪ್ರಜ್ವಲ್ ವಿ ಎಲ್, ಸುಶ್ಮಿತಾ ಯಾದವ್, ವಿನೋದ್ ಬಡಿಗರ್ ಮತ್ತು ನವೀನ್ ಹೆಚ್ ಬಿ ರವರಿಗೆ ಬಹುಮಾನಗಳನ್ನು ವಿತರಿಸಲಾಯಿತು.
ಸಂಸ್ಥೆಯ ಉಪನ್ಯಾಸಕರಾದ ಶ್ರೀ ಬಿ ಎಮ್ ಚಂದ್ರಶೇಖರ್, ಜಿ ಎಸ್ ಸಿದ್ದಪ್ಪ, ನರೇಶ್ ಕುಮಾರ್ ಹಾಗೂ ಸಂಸ್ಥೆಯ ಸಿಬ್ಬಂದಿ ವರ್ಗದವರಾದ ಶಿವಕುಮಾರ್, ವೆಂಕಟೇಶ ಮತ್ತು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!