ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಗಾಲಿ ಜನಾರ್ಧನ ರೆಡ್ಡಿಗೆ ಬಿಗ್ ರಿಲೀಫ್, ಸಿಬಿಐ (CBI) ಕೋರ್ಟ್ ವಿಧಿಸಿದ್ದ ಶಿಕ್ಷೆ ತಡೆನೀಡಿದ ತೆಲಂಗಾಣ ಹೈಕೋರ್ಟ್

ಕೊಪ್ಪಳ/ ಗಂಗಾವತಿ : ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಸಿಬಿಐ ವಿಧಿಸಿದ್ದ ಶಿಕ್ಷೆಯನ್ನು ತಡೆಹಿಡಿದು ತೆಲಂಗಾಣ ಹೈಕೋರ್ಟ್ ಆದೇಶ ಹೊರಡಿಸಿದೆ.

ಆದರೆ ಭಾರತವನ್ನು ತೊರೆಯುವಂತಿಲ್ಲ ಎಂದು ಆದೇಶ ಹೊರಡಿಸಿದ ಕೋರ್ಟ್ ಪಾಸ್ ಪೋರ್ಟ್ ವಶಕ್ಕೆ ನೀಡುವಂತೆ ಸೂಚಿಸಿದೆ. ಹಾಗೂ 10 ಲಕ್ಷ ರೂಗಳ 2 ಶ್ಯೂರಿಟಿ ನೀಡಬೇಕು ಎಂದು ಕೋರ್ಟ್ ಆದೇಶ ಹೊರಡಿಸಿದೆ.

ಪ್ರಕರಣದ ಹಿನ್ನೆಲೆ:

ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ಧನ ರೆಡ್ಡಿ ಅಪರಾಧಿ ಎಂದು ಹೈದರಾಬಾದ್ ಸಿಬಿಐ ಕೋರ್ಟ್ ಇತ್ತೀಚೆಗೆ ತೀರ್ಪು ಪ್ರಕಟಿಸಿದ್ದು, ಶಿಕ್ಷೆ ಪ್ರಮಾಣ ಪ್ರಕಟಿಸಿತ್ತು. ಓಬಳಾಪುರಂ ಮೈನಿಂಗ್ ಕೇಸ್ ನಲ್ಲಿ ಗಾಲಿ ಜನಾರ್ಧನ ರೆಡ್ಡಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿ ಸಿಬಿಐ ನ್ಯಾಯಾಲಯ ಆದೇಶ ಹೊರಡಿಸಿತ್ತು.

ಮಾಜಿ ಸಿ.ಎಂ ಬಿ. ಎಸ್. ಯಡಿಯೂರಪ್ಪ ಆಡಳಿತದ ಅವಧಿಯಲ್ಲಿ ನಡೆದಿದ್ದ ಅಕ್ರಮ ಗಣಿಗಾರಿಕೆ ಪ್ರಕರಣ ಇದಾಗಿದ್ದು, ಆಂಧ್ರ ಮತ್ತು ಕರ್ನಾಟಕದ ಗಡಿ ಭಾಗದ ಓಬಳಾಪುರಂ ಪ್ರದೇಶದ ಅದಿರಿನ ಅಕ್ರಮ ಗಣಿಕಾರಿಕೆಗೆ ಸಂಬಂಧಿಸಿದಂತೆ ಜನಾರ್ಧನ ರೆಡ್ಡಿ ಅಪರಾಧಿ ಎಂದು ಕೋರ್ಟ್ ತೀರ್ಪು ಪ್ರಕಟಿಸಿದ್ದು, 7 ವರ್ಷ ಜೈಲು ಶಿಕ್ಷೆ ವಿಧಿಸಿತ್ತು.

ಜನಾರ್ಧನ ರೆಡ್ದಿ ಈ ಕಂಪನಿಯ ಮುಖ್ಯಸ್ಥರಾಗಿದ್ದರು ಶ್ರೀನಿವಾಸರೆಡ್ಡಿ ಒಎಂಸಿ ಕಂಪನಿ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. ಈ ಕಂಪನಿಗೆ ಗಣಿಗಾರಿಕೆ ಮಂಜೂರಾತಿ ನೀಡುವಲ್ಲಿ ಅರಣ್ಯ ಇಲಾಖೆ, ಗಣಿ ಇಲಾಖೆಯಿಂದ ಅಕ್ರಮ ನಡೆದಿತ್ತು. ಜನಾರ್ಧನ ರೆಡ್ಡಿ ವಿರುದ್ಧ 29 ಲಕ್ಷ ಟನ್ ಅದಿರು ಲೂಟಿ ಮಾಡಿರುವ ಆರೋಪ ಕೇಳಿ ಬಂದಿದೆ. ಪ್ರಕರಣದಲ್ಲಿ ಜನಾರ್ಧನ ರೆಡ್ಡಿ ಸೇರಿದಂತೆ ಒಟ್ಟು 5 ಅಪರಾಧಿಗಳಿಗೆ 7 ವರ್ಷ ಜೈಲು ಶಿಕ್ಷೆ ಪ್ರಕಟವಾಗಿತ್ತು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ