ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮುಂಬೈನಲ್ಲಿ ಅಲ್ಲು ಅರ್ಜುನ್ ಹೊಸ ಸಿನಿಮಾಗೆ ಮುಹೂರ್ತ; ಶೂಟಿಂಗ್ ಆರಂಭ

ಮುಂಬೈ : ನಟ ಅಲ್ಲು ಅರ್ಜುನ್ (Allu Arjun) ಅವರು ನಿರ್ದೇಶಕ ಅಟ್ಲಿ ಜೊತೆ ಕೈ ಜೋಡಿಸಿರುವುದು ಗೊತ್ತೇ ಇದೆ. ‘ಪುಷ್ಪ 2’ ಸಿನಿಮಾದಿಂದ ಭಾರಿ ಗೆಲುವು ಕಂಡಿರುವ ಅಲ್ಲು ಅರ್ಜುನ್ ಹಾಗೂ ‘ಜವಾನ್’ ಸಿನಿಮಾದಿಂದ ಜಯಭೇರಿ ಬಾರಿಸಿರುವ ಅಟ್ಲಿ (Atlee) ಅವರು ಒಂದಾಗಿ ಸಿನಿಮಾ ಮಾಡುತ್ತಾರೆ ಎಂದಾಗಲೇ ಪ್ರೇಕ್ಷಕರ ನಿರೀಕ್ಷೆ ಜೋರಾಗಿತ್ತು. ಈಗ ಅವರಿಬ್ಬರ ಕಾಂಬಿನೇಷನ್​ನಲ್ಲಿ ಮೂಡಿಬರಲಿರುವ ಸಿನಿಮಾಗೆ ಮುಹೂರ್ತ ಮಾಡಲಾಗಿದೆ. ಮುಂಬೈನಲ್ಲಿ ಜೂನ್ 11ರಂದು ಮುಹೂರ್ತ ನಡೆದಿದೆ. ಇದರಲ್ಲಿ ಅಲ್ಲು ಅರ್ಜುನ್, ಅಟ್ಲಿ ಹಾಗೂ ಇಡೀ ಚಿತ್ರತಂಡ ಭಾಗಿಯಾಗಿತ್ತು.

ಈ ಸಿನಿಮಾಗೆ ಇನ್ನೂ ಶೀರ್ಷಿಕೆ ಏನೆಂಬುದು ಬಹಿರಂಗ ಆಗಿಲ್ಲ. ತಾತ್ಕಾಲಿಕವಾಗಿ ‘AA22xA6’ ಎಂದು ಕರೆಯಲಾಗುತ್ತಿದೆ. ಪಾತ್ರವರ್ಗದ ಬಗ್ಗೆ ಕೂಡ ಹೆಚ್ಚಿನ ಮಾಹಿತಿಯನ್ನು ಬಿಟ್ಟುಕೊಟ್ಟಿಲ್ಲ. ಅಲ್ಲು ಅರ್ಜುನ್ ಜೊತೆ ದೀಪಿಕಾ ಪಡುಕೋಣೆ ಅಭಿನಯಿಸುತ್ತಾರೆ ಎಂಬುದಷ್ಟೇ ಖಚಿತವಾಗಿದೆ. ಇನ್ನುಳಿದ ಪಾತ್ರಧಾರಿಗಳ ಬಗ್ಗೆ ಮುಂದಿನ ದಿನಗಳಲ್ಲಿ ಸುದ್ದಿ ಸಿಗಲಿದೆ.

ವರದಿಗಳ ಪ್ರಕಾರ, ಜೂನ್ 12ರಿಂದ ‘AA22xA6’ ಸಿನಿಮಾದ ಶೂಟಿಂಗ್ ಆರಂಭ ಆಗಲಿದೆ. ಇಷ್ಟು ದಿನಗಳ ಕಾಲ ಭರ್ಜರಿಯಾಗಿ ಪ್ರೀ-ಪ್ರೊಡಕ್ಷನ್ ಕೆಲಸಗಳನ್ನು ಮಾಡಲಾಗಿದೆ. ಸಾಕಷ್ಟು ತಯಾರಿಯೊಂದಿಗೆ ಅಲ್ಲು ಅರ್ಜುನ್ ಮತ್ತು ಅಟ್ಲಿ ಅವರು ಸಿನಿಮಾದ ಶೂಟಿಂಗ್ ಆರಂಭಿಸುತ್ತಿದ್ದಾರೆ. ಭಾರಿ ಬಜೆಟ್​ನಲ್ಲಿ ಈ ಸಿನಿಮಾ ನಿರ್ಮಾಣ ಆಗುತ್ತಿದೆ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ