ಬಳ್ಳಾರಿ / ಕಂಪ್ಲಿ : ಪಟ್ಟಣದ ಕೊಟ್ಟಾಲ್ ರಸ್ತೆಯ ಮಾಜಿ ಶಾಸಕ ಸುರೇಶ ಬಾಬು ಅವರ ತುಂಗಭದ್ರಾ ಕಾರ್ಯಾಲಯದಲ್ಲಿ ಭಾರತೀಯ ಜನತಾ ಪಾರ್ಟಿ ಕಂಪ್ಲಿ ಮಂಡಲ ವತಿಯಿಂದ ವಿಕಸಿತ ಭಾರತದ ಅಮೃತ ಕಾಲ ಸೇವೆ, ಮಾಶಾಸನ, ಬಡವರ ಕಲ್ಯಾಣ್ ಮೋದಿ ಸರ್ಕಾರಕ್ಕೆ 11 ವರ್ಷ ತುಂಬಿದ ಹಿನ್ನಲೆ ವಿಕಸಿತ ಭಾರತ ಸಂಕಲ್ಪ ಸಭೆಯ ಶನಿವಾರ ಜರುಗಿತು.
ಸಭೆಯ ಅಧ್ಯಕ್ಷತೆವಹಿಸಿ ವಿಧಾನ ಪರಿಷತ್ ಸದಸ್ಯ ವೈ.ಎಂ.ಸತೀಶ ಮಾತನಾಡಿ, ಕೇಂದ್ರ ಸರಕಾರದ ಅನೇಕ ಯೋಜನೆಗಳನ್ನು ಮನೆ ಮನೆಗೆ ತಲುಪಿಸಬೇಕೆಂಬುದು ವಿಕಸಿತ ಭಾರತ ಸಂಕಲ್ಪದ ಉದ್ದೇಶವಾಗಿದೆ. ಕೇಂದ್ರ ಸರಕಾರದ ಯೋಜನೆಗಳನ್ನು ಬಡವರ ಮನೆ ಬಾಗಿಲಿಗೆ ತಲುಪಿಸುವ ಕಾರ್ಯಕ್ರಮ ಇದಾಗಿದೆ. ಈ ದೇಶದ ಬಡವರ ಸಂಕಷ್ಟ, ಈ ದೇಶದ ರೈತರ ಸಮಸ್ಯೆಗಳನ್ನು ಅರಿತುಕೊಂಡು ಪಿಎಂ ಕೃಷಿ ಸಮ್ಮಾನ್, ಫಸಲ್ ಭೀಮಾ, ಗೊಬ್ಬರದ ಸಬ್ಸಿಡಿ, ಈ ದೇಶದ ಪ್ರತಿ ಮನೆಗೂ ಶೌಚಾಲಯ, ಪಿ.ಎಂ ಆವಾಜ್ ಯೋಜನೆ, ಉಜ್ವಲ ಯೋಜನೆಯಡಿ ಉಚಿತ ಗ್ಯಾಸ್ ಸಂಪರ್ಕ ನೀಡಿದ ಶ್ರೇಯಸ್ಸು ಕೇಂದ್ರ ಸರ್ಕಾರಕ್ಕೆ ಸಲ್ಲುತ್ತದೆ ಎಂದರು.
ನಂತರ ಕಂಪ್ಲಿ ಮಂಡಲ ಅಧ್ಯಕ್ಷ ಸಿ.ಡಿ.ಮಹಾದೇವ ಮಾತನಾಡಿ, ಕೇಂದ್ರದ ನರೇಂದ್ರ ಮೋದಿ ಸರ್ಕಾರ ಸಾಕಷ್ಟು ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ. ಮುದ್ರಾ ಯೋಜನೆಯಡಿ ಸಾಲ ಸೌಲಭ್ಯ ನೀಡಿದೆ. ಮುಂದಿನ ದಿನದಲ್ಲಿ ಕಂಪ್ಲಿ ಪುರಸಭೆಯ ವಾರ್ಡ್ ಚುನಾವಣೆಗಳು ಬರಲಿದ್ದು, ಈಗಲಿಂದಲೇ ಸಂಘಟನೆ ಮೂಲಕ ಬಿಜೆಪಿಯನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದರು.
ವಿಕಸಿತ ಭಾರತ ಸಂಕಲ್ಪ ಹಿನ್ನಲೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಇತ್ತೀಚೆಗೆ ವಿಮಾನದ ದುರ್ಘಟನೆಯಲ್ಲಿ ಸಾಕಷ್ಟು ಜನರು ಮೃತಪಟ್ಟ ಪರಿಣಾಮ ಒಂದು ನಿಮಿಷ ಮೌನಾಚಾರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷ ಯರಂಗಳಿ ತಿಮ್ಮಾರೆಡ್ಡಿ, ಮಹಿಳಾ ಘಟಕದ ರಾಜ್ಯ ಕಾರ್ಯದರ್ಶಿ ಸುಗುಣ, ಪುರಸಭೆ ಸದಸ್ಯರಾದ ರಾಮಾಂಜಿನೇಯ, ಟಿ.ವಿ.ಸುದರ್ಶನರೆಡ್ಡಿ, ಆರ್.ಆಂಜನೇಯ, ಯುವ ಮೋರ್ಚ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ, ನಗರ ಘಟಕ ಅಧ್ಯಕ್ಷ ಮುರುಳಿ ಮೋಹನ್ ರೆಡ್ಡಿ, ಮುಖಂಡರಾದ ಅಳ್ಳಳ್ಳಿ ವಿರೇಶ, ಪಿ.ಬ್ರಹ್ಮಯ್ಯ, ಜಿ.ಸುಧಾಕರ, ಎಂ.ಗುರುರಾಜ, ದೇವಲಾಪುರ ರವಿ, ಕೊಡಿದಲ್ ರಾಜು, ಬಿ.ದೇವೆಂದ್ರ, ಚಂದ್ರಶೇಖರ ಗೌಡ, ಶ್ರೀನಿವಾಸ, ಶಿವುಕುಮಾರ, ಬಸವಪ್ರಭು, ಹೂವಣ್ಣ, ಕಟ್ಟೆ ವಿಶ್ವನಾಥ, ರಬಿಯಾ ನಿಸಾರ ಸೇರಿದಂತೆ ಅನೇಕರು ಇದ್ದರು.
ವರದಿ : ಜಿಲಾನಸಾಬ್ ಬಡಿಗೇರ್



















