ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

‘ಕಾಂತಾರ ಚಾಪ್ಟರ್ 1’ ಸೆಟ್​​ನಲ್ಲಿ ಮತ್ತೊಂದು ಭಾರಿ ಅವಘಡ

ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡುತ್ತಿರುವ ‘ಕಾಂತಾರ ಚಾಪ್ಟರ್ 1’ ಸಿನಿಮಾದ ಚಿತ್ರೀಕರಣ ನಡೆಯುತ್ತಿದ್ದು, ಚಾಪ್ಟರ್ 1’ ಸಿನಿಮಾ ಸೆಟ್​ನಲ್ಲಿ ಸರಣಿ ಅವಘಡಗಳು ನಡೆಯುತ್ತಲೇ ಇವೆ. ಮೊದಲಿಗೆ ಸಿನಿಮಾದಲ್ಲಿ ಕೆಲಸ ಮಾಡುತ್ತಿದ್ದ ಕೇರಳ ಮೂಲದ ಜೂನಿಯರ್ ಆರ್ಟಿಸ್ಟ್ ಒಬ್ಬರು ಈಜಲು ಹೋಗಿ ಮುಳುಗಿ ಪ್ರಾಣಬಿಟ್ಟರು. ಅದಾದ ಮೇಲೆ ಸಿನಿಮಾನಲ್ಲಿ ನಟಿಸಿದ್ದ ಕನ್ನಡದ ಹಾಸ್ಯ ಕಲಾವಿದ ರಾಕೇಶ್ ಪೂಜಾರಿ ಹೃದಯಾಘಾತದಿಂದ ಮೃತಪಟ್ಟರು. ಕೆಲ ದಿನಗಳ ಹಿಂದಷ್ಟೆ ವಿಜು ವಿಕೆ ಎಂಬ ಕೇರಳದ ಕಲಾವಿದ ಮೃತಪಟ್ಟರು. ಅವರು ಸಹ ‘ಕಾಂತಾರ’ ಸಿನಿಮಾನಲ್ಲಿ ನಟಿಸುತ್ತಿದ್ದರು. ಇದೆಲ್ಲದರ ಬಳಿಕ ಈಗ ದೋಣಿಯೇ ಮುಗಿಚಿದೆ. ಆದರೆ ಯಾವುದೇ ಜೀವಹಾನಿ ಸಂಭವಿಸಿದ ವರದಿ ಈ ವರೆಗೆ ಆಗಿಲ್ಲ.

ಕಾಂತಾರ ಚಾಪ್ಟರ್ 1’ ಸಿನಿಮಾದ ಚಿತ್ರೀಕರಣ ನಡೆಸಲಾಗುತ್ತಿದ್ದ ಬೋಟ್ ಒಂದು ಮುಗಿಚಿದೆಯಂತೆ ಬೋಟ್​​ನಲ್ಲಿ ರಿಷಬ್ ಶೆಟ್ಟಿ ಸೇರಿದಂತೆ ಸುಮಾರು 30ಕ್ಕೂ ಹೆಚ್ಚು ಮಂದಿ ಕಲಾವಿದರು ಹಾಗೂ ತಂತ್ರಜ್ಞರು ಇದ್ದರೆಂದು ವರದಿ ಆಗಿದೆ. ಚಿತ್ರೀಕರಣ ಚಾಲ್ತಿಯಲ್ಲಿರುವಾಗಲೇ ಬೋಟು ಮುಗಿಚಿದೆ ಆದರೆ ಯಾವುದೇ ಜೀವ ಹಾನಿ ಆಗಿಲ್ಲ. ಕಲಾವಿದರು, ತಂತ್ರಜ್ಞರೆಲ್ಲರೂ ಈಜಿಕೊಂಡು ದಡಕ್ಕೆ ಬಂದಿದ್ದಾರೆ ಎನ್ನಲಾಗುತ್ತಿದೆ.

ಮಾಸ್ತಿಕಟ್ಟೆಯ ಮಾಣಿ ಜಲಾಶಯದಲ್ಲಿ ಸಿನಿಮಾದ ಚಿತ್ರೀಕರಣ ಮಾಡಲಾಗುತ್ತಿತ್ತು. ಕತ್ತಲಿನಲ್ಲೇ ಸಿನಿಮಾದ ಶೂಟಿಂಗ್ ಮಾಡಲಾಗುತ್ತಿತ್ತು. ದೋಣಿ ಮುಗಿಚಿದರೂ ಕಲಾವಿದರು ಮತ್ತು ತಂತ್ರಜ್ಞರು ಸೇಫ್ ಆಗಿದ್ದಾರಾದರೂ ಕ್ಯಾಮೆರಾ ಇನ್ನಿತರೆ ಸೆಟ್ ಪ್ರಾಪರ್ಟಿಗಳು ನೀರು ಪಾಲಾಗಿವೆ ಎನ್ನಲಾಗುತ್ತಿದೆ. ಆದರೆ ಈ ಘಟನೆ, ಈಗಾಗಲೇ ಹೆದರಿರುವ ‘ಕಾಂತಾರ: ಚಾಪ್ಟರ್ 1’ ಚಿತ್ರತಂಡವನ್ನು ಮತ್ತಷ್ಟು ಹೆದರಿಸಿದೆ.

ಸಿನಿ ವರದಿ: ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ