ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಅಕ್ರಮ ಗಾಂಜಾ ಮಾರಾಟ : ಇಬ್ಬರು ಆರೋಪಿಗಳು ಅಂದರ್

ಕೊಡಗು/ ಸುಂಟಿಕೊಪ್ಪ : ಅಕ್ರಮವಾಗಿ ನಿಷೇಧಿತ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಸುಂಟಿಕೊಪ್ಪ ಪೊಲೀಸರು ಯಶಸ್ವಿಯಾಗಿದ್ದಾರೆ. ಕೊಡಗರಹಳ್ಳಿಯ ಆಟೋ ಚಾಲಕ ಜಗದೀಶ್ ಅಲಿಯಾಸ್ ಜಗ್ಗ ಮತ್ತು ಗದ್ದೆಹಳ್ಳ ನಿವಾಸಿ ನೌಫಲ್ ಎಂಬಿಬ್ಬರು ಬಂಧನಕ್ಕೊಳಗಾಗಿರುವ ಆರೋಪಿಗಳಾಗಿದ್ದು ಇವರಿಂದ 80 ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.

ನಿನ್ನೆ ರಾತ್ರಿ ಸುಂಟಿಕೊಪ್ಪ ಪಟ್ಟಣದಲ್ಲಿ ಆರೋಪಿಗಳಿಬ್ಬರು ಅಕ್ರಮವಾಗಿ ನಿಷೇಧಿತ ಗಾಂಜಾ ಮಾರಾಟ ಮಾಡುತ್ತಿದ್ದ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಕುಶಾಲನಗರ ಡಿ ಎಸ್ ಪಿ ಚಂದ್ರಶೇಖರ್ ಹಾಗೂ ವೃತ್ತ ನಿರೀಕ್ಷಕರಾದ ದಿನೇಶ್ ಕುಮಾರ್ ರವರ ಮಾರ್ಗದರ್ಶನದಲ್ಲಿ ಸುಂಟಿಕೊಪ್ಪ ಪೊಲೀಸ್ ಠಾಣಾ ಸಬ್ ಇನ್ಸ್ ಪೆಕ್ಟರ್ ಮೋಹನ್ ರಾಜ್, ಕ್ರೈಮ್ ಸಬ್ ಇನ್ಸ್ ಪೆಕ್ಟರ್ ಭಾರತಿ ಮತ್ತು ಸಿಬ್ಬಂದಿಗಳು ದಾಳಿ ಮಾಡಿ ಮಾಲು ಸಮೇತ ಆರೋಪಿಗಳನ್ನು ಬಂಧಿಸಿದ್ದಾರೆ. ಇವರಿಬ್ಬರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ