ಕಲಬುರಗಿಯ ಹೋರಾಟಗಾರ ಲಿಂಗರಾಜ ಸಿರಗಾಪೂರ ಅವರಿಗೆ ಫರಿದಾಬಾದನ ಮ್ಯಾಜಿಕ್ ಆಂಡ್ ಆರ್ಟ್ಸ್ ವಿಶ್ವವಿದ್ಯಾಲಯವು ಸಮಾಜ ಸೇವೆಗಾಗಿ ಗೌರವ ಡಾಕ್ಟರೇಟ್ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಸುಮಾರು ಎರಡು ದಶಕಗಳಿಂದ ಹೋರಾಟ ಕ್ಷೇತ್ರ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಸಿರಗಾಪೂರ ಅವರಿಗೆ ಹರಿಯಾಣದ ಮ್ಯಾಜಿಕ್ ಆಫ್ ಆರ್ಟ್ಸ್ ವಿಶ್ವ ವಿದ್ಯಾಲಯದಲ್ಲಿ ನಡೆದ ಸಮಾರಂಭದಲ್ಲಿ ಗೌರವ ಡಾಕ್ಟರೇಟ್ ಪ್ರಶಸ್ತಿ ಪ್ರದಾನ ಮಾಡಲಾಗಿದೆ ಎಂದು ಕನ್ನಡ ಭೂಮಿ ಜಾಗೃತಿ ಸಮಿತಿ ವಕ್ತಾರ ಆನಂದ ತೆಗನೂರ ತಿಳಿಸಿದ್ದಾರೆ.
- ಕರುನಾಡ ಕಂದ
