ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕೇಂದ್ರ ಸರ್ಕಾರವು ಇಡಿ ಮೂಲಕ ಎಸ್ ಸಿ, ಎಸ್ ಟಿ ಕಾಂಗ್ರೆಸ್ ಶಾಸಕರ ಟಾರ್ಗೆಟ್ ಮಾಡಿದೆ : ವೀರಾಂಜಿನೀಯಲು ಆರೋಪ

ಬಳ್ಳಾರಿ / ಕಂಪ್ಲಿ : ಎಸ್ ಸಿ, ಎಸ್ ಟಿ ಸಮಾಜದ ಶಾಸಕರನ್ನು ಕೇಂದ್ರ ಸರ್ಕಾರವು ಇಡಿ ಅಧಿಕಾರಿಗಳ ಮೂಲಕ ಟಾರ್ಗೇಟ್ ಮಾಡಿದೆ ಎಂದು ಬಳ್ಳಾರಿ ಜಿಲ್ಲಾ ಪರಿಶಿಷ್ಟ ಜಾತಿಯ ಕಾಂಗ್ರೆಸ್ ಗ್ರಾಮೀಣ ಜಿಲ್ಲಾಧ್ಯಕ್ಷ ವೀರಾಂಜಿನೀಯಲು ಆರೋಪಿಸಿದರು.
ಅವರು ಭಾನುವಾರ ಪಟ್ಟಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ, ಸ್ಥಳೀಯ ಶಾಸಕರಾದ ಜೆ.ಎನ್.ಗಣೇಶ ಅವರು ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯ ಮಾಡಿದ್ದಾರೆ. ಇವರ ಅಭಿವೃದ್ಧಿ ಕಾರ್ಯವನ್ನು ಸಹಿಸದ ಬಿಜೆಪಿಯವರು ರಾಜಕೀಯ ಷಡ್ಯಂತ್ರದಿಂದ ಇಡಿ ಅಧಿಕಾರಿಗಳಿಂದ ದಾಳಿ ಮಾಡಿಸಿದ್ದಾರೆ. ದಲಿತ ಮತ್ತು ವಾಲ್ಮೀಕಿ ಸಮಾಜದ ಶಾಸಕರನ್ನು ಕುಗ್ಗಿಸುವ ಕೆಲಸಕ್ಕೆ ಕೈಹಾಕಿದ್ದು, ಇದರಿಂದ ಯಾವುದೇ ಪ್ರಯೋಜನೆಯಾಗುವುದಿಲ್ಲ. ಐಟಿ, ಇಡಿ, ಸಿಬಿಐ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ. ಕರ್ನಾಟಕದಲ್ಲಿ ಅಧಿಕಾರ ಇಲ್ಲದೇ ಮಂಗನಂತಿರುವ ಬಿಜೆಪಿಗರು ಕಾಂಗ್ರೆಸ್ ಶಾಸಕರ, ಸಂಸದರ ಮೇಲೆ ದಾಳಿ ಮಾಡಿಸುತ್ತಿದ್ದಾರೆ. ಇ.ಡಿ ದಾಳಿ ವೇಳೆ ಶಾಸಕರು ಖಡಕ್ಕಾಗಿ ಉತ್ತರ ನೀಡಿದ್ದಾರೆ. ಇಂತಹ ದಾಳಿಗೆ ಹೆದರುವವರಲ್ಲ ನಮ್ಮ ಶಾಸಕರು. ಮುಂದಿನ ದಿನದಲ್ಲಿ ಇದೇ ರೀತಿಯಲ್ಲಿ ಐಟಿ ದಾಳಿ ಮಾಡಿಸಿದರೆ, ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!